No menu items!
13.7 C
Munich
Sunday, September 13, 2026

ಪ್ರೇಯಸಿಯ ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆ!

Must read

ಪ್ರೇಯಸಿಯ ಮನೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆ!

ಬೆಂಗಳೂರು: ನಗರದ ಅಂಜನಾಪುರದಲ್ಲಿ ಮಂಗಳವಾರ ದಾರುಣ ಘಟನೆ ಸಂಭವಿಸಿದ್ದು, ಪ್ರಿಯಕರನೊಬ್ಬ ಪ್ರೇಯಸಿಯ ಮನೆಗೆ ನುಗ್ಗಿ ಪೆಟ್ರೋಲ್ ಸುರಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಯುವತಿಗೆ ಬೆಂಕಿ ಹಚ್ಚಲು ಯತ್ನಿಸಿದ್ದಾನೆ.
ಮೃತನನ್ನು ಕಿರಣ್ ಎಂದು ಗುರುತಿಸಲಾಗಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕಿರಣ್ ಮತ್ತು ಯುವತಿ ನಡುವೆ ಸ್ನೇಹ ಬೆಳೆಯಿತು. ಬಳಿಕ ಅದು ಪ್ರೀತಿಯಾಗಿ ಮಾರ್ಪಟ್ಟಿತ್ತು ಎನ್ನಲಾಗಿದೆ.
ಯುವತಿಯ ತಾಯಿ ಮತ್ತು ಅಣ್ಣ ಮನೆಯಲ್ಲಿ ಇಲ್ಲದ ಸಮಯದಲ್ಲಿ ಕಿರಣ್ ಆಕೆಯ ಮನೆಗೆ ಮಾತನಾಡಲು ತೆರಳಿದ್ದಾನೆ. ಪೆಟ್ರೋಲ್ ತೆಗೆದುಕೊಂಡೇ ಮನೆಗೆ ಬಂದಿದ್ದ ಆತ, ಯುವತಿಯೊಂದಿಗೆ ಗಲಾಟೆ ಮಾಡಿಕೊಂಡಿದ್ದಾನೆ. ಮಾತಿನ ಚಕಮಕಿಯ ಮಧ್ಯೆ ಕಿರಣ್ ತನ್ನ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾನೆ.
ಇದಲ್ಲದೆ, ಪ್ರೇಯಸಿಗೂ ಬೆಂಕಿ ಹಚ್ಚಲು ಯತ್ನಿಸಿದ್ದಾನೆ. ಈ ವೇಳೆ ಕಿರುಚುತ್ತಾ ತಪ್ಪಿಸಿಕೊಳ್ಳಲು ಯತ್ನಿಸಿದ ಯುವತಿಗೆ ಸಣ್ಣಪುಟ್ಟ ಸುಟ್ಟಗಾಯಗಳಾಗಿವೆ.
ಬೆಂಕಿಯ ತೀವ್ರತೆಗೆ ಕಿರಣ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರೀತಿ ವಿಚಾರದಲ್ಲಿ ಮನಸ್ತಾಪ ಉಂಟಾಗಿ ಈ ಕೃತ್ಯ ನಡೆದಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

- Advertisement -spot_img

More articles

- Advertisement -spot_img

Latest article