No menu items!
13.7 C
Munich
Sunday, September 13, 2026

ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ, ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ!

Must read

ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ, ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ!

ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಮತ್ತು ಪೇದೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಬಂಧಿತರನ್ನು ಕೆರೂರು ಪೊಲೀಸ್ ಠಾಣೆಯ ಪಿಎಸ್ಐ ಭೀಮಪ್ಪ ರಬಕವಿ ಮತ್ತು ಪೇದೆ ಸಂತೋಷ್ ಬಿರಾದರ್ ಎಂದು ಗುರುತಿಸಲಾಗಿದೆ.
ಇಸ್ಪೀಟ್ ಆಡುತ್ತಿದ್ದ ವೇಳೆ ಸಿಕ್ಕಿಬಿದ್ದ ಆರೋಪಿಯನ್ನು ಪ್ರಕರಣದಿಂದ ಕೈಬಿಡಲು ಹಾಗೂ ಆತನ ಬೈಕ್ ಬಿಡುಗಡೆ ಮಾಡಲು ₹2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ₹1.70 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ರೆಡ್ಹ್ಯಾಂಡ್గా ಬಂಧಿಸಿದ್ದಾರೆ.
ಈ ಸಂಬಂಧ ಮುತ್ತಪ್ಪ ನಾಯ್ಕರ್ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದು, ಫೋನ್ ಕರೆ ರೆಕಾರ್ಡಿಂಗ್ ಆಧಾರವಾಗಿ ದಾಳಿ ನಡೆಸಲಾಗಿದೆ.
ಲೋಕಾಯುಕ್ತ ಎಸ್ಪಿ ಮಹಾಲಿಂಗ ನಂದಗಾಂವಿ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಸುರೇಶ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

- Advertisement -spot_img

More articles

- Advertisement -spot_img

Latest article