No menu items!
22.4 C
Munich
Wednesday, July 15, 2026

ಜೋಕಾಲಿಯಲ್ಲಿ ಆಡುತ್ತಿದ್ದಾಗ ಕುಣಿಕೆ ಬಿಗಿದು, ಬಾಲಕಿ ಸಾವು!

Must read

ಜೋಕಾಲಿಯಲ್ಲಿ ಆಡುತ್ತಿದ್ದಾಗ ಕುಣಿಕೆ ಬಿಗಿದು, ಬಾಲಕಿ ಸಾವು!

ಶಿವಮೊಗ್ಗ: ಜೋಕಾಲಿ ಆಡುವಾಗ ಕುಣಿಕೆ ಬಿಗಿದು 9 ವರ್ಷದ ಬಾಲಕಿ ಮೃತಪಟ್ಟ ದುರ್ಘಟನೆ ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಪ್ರಣಮ್ಯ (9) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗದ ವಿದ್ಯಾನಗರ ನಿವಾಸಿಯಾಗಿದ್ದು, ಬೇಸಿಗೆ ರಜೆ ಹಿನ್ನೆಲೆಯಲ್ಲಿ ಚಿಕ್ಕಮ್ಮನ ಮನೆಗೆ ತೆರಳಿದ್ದರು.

ಲಕ್ಕಿನಕೊಪ್ಪದಲ್ಲಿದ್ದ ಚಿಕ್ಕಮ್ಮನ ಮನೆಯಲ್ಲಿ ಪಂಚೆಯಿಂದ ಜೋಕಾಲಿ ಮಾಡಿಕೊಂಡು ಆಟವಾಡುತ್ತಿದ್ದ ವೇಳೆ, ಆಕಸ್ಮಿಕವಾಗಿ ಕುಣಿಕೆ ಬಿಗಿದು ಪ್ರಣಮ್ಯ ಸಾವನ್ನಪ್ಪಿದ್ದಾಳೆ. ಈ ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

- Advertisement -spot_img

More articles

- Advertisement -spot_img

Latest article