No menu items!
23.8 C
Munich
Sunday, August 16, 2026

ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಹೇಳಿಕೆ; ಸಿ.ಟಿ. ರವಿ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ FIR

Must read

ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಹೇಳಿಕೆ; ಸಿ.ಟಿ. ರವಿ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ FIR

ಚಿಕ್ಕಮಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆ ನಡೆದ ಪ್ರತಿಭಟನೆ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ವತಿಯಿಂದ ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಆಯೋಜಿಸಲಾಗಿದ್ದ ‘ಯೂತ್ ಫಾರ್ ನೇಷನ್’ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಸಿ.ಟಿ. ರವಿ ಅವರು ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಸಭೆಯಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ವಾಗ್ದಾಳಿ ನಡೆಸಿದ ವೇಳೆ, ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ಸಿ.ಟಿ. ರವಿ ನೀಡಿದ ಹೇಳಿಕೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದು, ಸಮಾಜದಲ್ಲಿ ದ್ವೇಷ ಮತ್ತು ಅಶಾಂತಿ ಸೃಷ್ಟಿಸುವ ಉದ್ದೇಶ ಹೊಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ಚಿಕ್ಕಮಗಳೂರಿನ ಜಾಮೀಯ ಮಸೀದಿ ಅಧ್ಯಕ್ಷ ಮುದಾಸೀರ್ ಪಾಷಾ ಅವರು ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪದಡಿ ಸಿ.ಟಿ. ರವಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.
ದೂರು ಆಧರಿಸಿ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

- Advertisement -spot_img

More articles

- Advertisement -spot_img

Latest article