No menu items!
27.6 C
Munich
Tuesday, September 8, 2026

ಕರ್ನಾಟಕಕ್ಕೆ ಮತ್ತೆ ಕಾವೇರಿ ಆಘಾತ! ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಹರಿಸಲು CWRC ಸೂಚನೆ

Must read

ಕರ್ನಾಟಕಕ್ಕೆ ಮತ್ತೆ ಕಾವೇರಿ ಆಘಾತ! ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಹರಿಸಲು CWRC ಸೂಚನೆ

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ರಾಜ್ಯದ ಅಧಿಕಾರಿಗಳು ತಮ್ಮ ವಾದ ಮಂಡಿಸಿದರೂ ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೂಚನೆ ನೀಡಿದೆ.
ಈ ಮೂಲಕ ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು CWMA ಎತ್ತಿಹಿಡಿದಿದೆ.
CWMA ಅಧ್ಯಕ್ಷ ಎಸ್.ಕೆ. ಹಲ್ದಾರ್ ಅವರ ನೇತೃತ್ವದಲ್ಲಿ ಇಂದು ಪ್ರಾಧಿಕಾರದ ಕಚೇರಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಅಧಿಕಾರಿಗಳು ವರ್ಚ್ಯುಯಲ್ ಮೂಲಕ ಭಾಗವಹಿಸಿದ್ದರು. ಕರ್ನಾಟಕದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಕೂಡ ಸಭೆಯಲ್ಲಿ ವರ್ಚ್ಯುಯಲ್ ಮೂಲಕ ಪಾಲ್ಗೊಂಡಿದ್ದರು.
ಇದಕ್ಕೂ ಮುನ್ನ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಶಿಫಾರಸು ಮಾಡಿತ್ತು. ಇದೀಗ CWMA ಕೂಡ ಅದೇ ಪ್ರಮಾಣದ ನೀರನ್ನು ಹರಿಸುವಂತೆ ಸೂಚನೆ ನೀಡಿದೆ.
ರಾಜ್ಯದ ಜಲಾಶಯಗಳಲ್ಲಿನ ನೀರಿನ ಲಭ್ಯತೆ ಹಾಗೂ ಕರ್ನಾಟಕದ ಅಗತ್ಯತೆಗಳ ಕುರಿತು ರಾಜ್ಯದ ಅಧಿಕಾರಿಗಳು ತಮ್ಮ ವಾದವನ್ನು ಮಂಡಿಸಿದ್ದರು. ಆದರೂ CWMA, CWRC ಶಿಫಾರಸಿನಂತೆ ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಹರಿಸುವ ನಿರ್ಧಾರವನ್ನು ಮುಂದುವರಿಸಿದೆ.
CWMA ನಿರ್ಧಾರದಿಂದ ಕರ್ನಾಟಕ-ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜ್ಯದಲ್ಲಿ ಈ ಕುರಿತು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಚರ್ಚೆ ಆರಂಭವಾಗಿದೆ.

- Advertisement -spot_img

More articles

- Advertisement -spot_img

Latest article