No menu items!
18.8 C
Munich
Wednesday, July 29, 2026

CWRC ಆದೇಶಕ್ಕೆ ಅಸಮಾಧಾನ: ತಮಿಳುನಾಡಿಗೆ ನೀರು ಹರಿಸುವ ವಿಚಾರದಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದ ರಾಮಲಿಂಗಾರೆಡ್ಡಿ

Must read

CWRC ಆದೇಶಕ್ಕೆ ಅಸಮಾಧಾನ: ತಮಿಳುನಾಡಿಗೆ ನೀರು ಹರಿಸುವ ವಿಚಾರದಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದ ರಾಮಲಿಂಗಾರೆಡ್ಡಿ

ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದಿಂದ ರಾಜ್ಯ ಸರ್ಕಾರಕ್ಕೆ ಸಮಾಧಾನವಾಗಿಲ್ಲ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶದ ಕುರಿತು ಪ್ರತಿಕ್ರಿಯಿಸಿದ ಅವರು, ಸಮಿತಿಯ ತೀರ್ಮಾನ ರಾಜ್ಯದ ಹಿತಾಸಕ್ತಿಗೆ ಅನುಗುಣವಾಗಿಲ್ಲ ಎಂದು ಹೇಳಿದ್ದಾರೆ.
“ಕಾವೇರಿ ನೀರು ನಿರ್ವಹಣಾ ಸಮಿತಿಯ ತೀರ್ಮಾನ ನಮಗೆ ಸಮಾಧಾನ ತಂದಿಲ್ಲ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೇಲ್ಮನವಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಹೀಗಾಗಿ ನಾವು ಅಪೀಲ್ಗೆ ಹೋಗುತ್ತೇವೆ” ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಸದ್ಯ ಇರುವ ನೀರಿನ ಸಂಗ್ರಹದಲ್ಲಿ ಡೆಡ್ ಸ್ಟೋರೇಜ್ ಲೆಕ್ಕ ಪರಿಗಣಿಸಲು ಸಾಧ್ಯವಿಲ್ಲ. ಕುಡಿಯುವ ನೀರಿನ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ನೀರನ್ನು ಉಳಿಸಿಕೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.
“ಡೆಡ್ ಸ್ಟೋರೇಜ್ ಎಷ್ಟು ಇದೆ, ಕುಡಿಯುವ ನೀರಿಗೆ ಎಷ್ಟು ನೀರು ಲಭ್ಯವಿದೆ ಎಂಬುದನ್ನು ಪರಿಶೀಲಿಸಬೇಕು. ಬೆಂಗಳೂರು, ಮಂಡ್ಯ, ರಾಮನಗರ, ಚನ್ನಪಟ್ಟಣ ಸೇರಿದಂತೆ ಹಲವು ಪ್ರದೇಶಗಳಿಗೆ ಕುಡಿಯುವ ನೀರಿನ ಅಗತ್ಯವಿದೆ. ಹೀಗಾಗಿ ಕಾವೇರಿ ಸಮಿತಿ ಆದೇಶ ನಮಗೆ ತೃಪ್ತಿ ತಂದಿಲ್ಲ” ಎಂದು ಅವರು ತಿಳಿಸಿದ್ದಾರೆ.
ಇದೇ ವೇಳೆ ಬಿಜೆಪಿ ಟೀಕೆಗಳಿಗೆ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ, ಬಿಜೆಪಿ ನಾಯಕರು ಸಾಮಾನ್ಯ ಜ್ಞಾನವಿಲ್ಲದೆ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
“ಬಿಳಿಗುಂಡ್ಲು ಬಳಿ ಹೋಗಿ ಪರಿಶೀಲನೆ ಮಾಡಲಿ. ಅಲ್ಲಿ ಎಷ್ಟು ನೀರು ಹರಿಸಿದ್ದೇವೆ ಎಂಬುದು ಗೊತ್ತಾಗುತ್ತದೆ. ಸದ್ಯ ಕೇವಲ 3,500 ಕ್ಯೂಸೆಕ್ ನೀರು ಮಾತ್ರ ಹರಿಸಲಾಗುತ್ತಿದೆ. ರಾಜ್ಯದಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ” ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

- Advertisement -spot_img

More articles

- Advertisement -spot_img

Latest article