ತಮಿಳುನಾಡಿಗೆ ಅಪ್ಪಳಿಸಲಿದೆ ಚಂಡಮಾರುತ: ರಾಜ್ಯದಲೂ 3 ದಿನ ಮಳೆ ಯಾಗುವ ಸಾಧ್ಯತೆ..

Date:

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಚಂಡಮಾರುತವಾಗಿ ಮಾರ್ಪಟ್ಟಿದ್ದು ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಚೆನ್ನೈನಿಂದ ಸುಮಾರು 770 ಕಿಮೀ ದೂರದದಲ್ಲಿ ನಾಡಾ ಚಂಡಮಾರುತ ಎದ್ದಿದ್ದು ಡಿ.2ರಂದು ಕಡಲೂರು ಮೂಲಕ ಭಾರತವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದ ಪರಿಣಾಮವಾಗಿ ಇಂದು ತಮಿಳುನಾಡಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದ್ದು, ಗುರುವಾರದಿಂದ ಭಾರೀ ಮಳೆಯಾಗುವ ಸಂಭವವಿದೆ. ಇನ್ನು ಚಂಡಮಾರುತದ ಮುನ್ನೆಚ್ಚರಿಕಾ ಕ್ರಮವಾಗಿ ತಮಿಳುನಾಡು, ಪುದುಚೇರಿ ವ್ಯಾಪ್ತಿಯ ಕಡಲತೀರಗಳಲ್ಲಿ ಮೀನುಗಾರಿಕೆ ನಡೆಸುತ್ತಿರುವವರನ್ನು ಕೂಡಲೇ ಹಿಂದಕ್ಕೆ ಬರುವಂತೆ ಸೂಚನೆ ನೀಡಿದ್ದು, ಇಂದು ಮಧ್ಯಾಹ್ನದಿಂದಲೇ ಮೀನಗಾರಿಕೆಗೆ ನಿರ್ಬಂಧ ಹೇರಲಾಗಿದೆ. ಸಮುದ್ರದ ಕಡದಲ್ಲಿರುವ ಜನರನ್ನು ಒಕ್ಕಲೆಬ್ಬಿಸುವ ಪ್ರಯತ್ನ ಈಗಾಗಲೇ ಕಾರ್ಯಾರಂಭಗೊಂಡಿದೆ. ಚಂಡಮಾರುತ ಎದುರಿಸಲು ಎಲ್ಲಾ ರೀತಿಯ ತಯಾರಿ ನಡೆಸಿಕೊಂಡಿದ್ದೇವೆ ಎಂದು ಪುದುಚ್ಚೇರಿ ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ತಿಳಿಸಿದ್ದಾರೆ.
ರಾಜ್ಯದಲ್ಲಿ 3 ದಿನ ಮಳೆ:
ತಮಿಳುನಾಡಿನಲ್ಲಿ ಚಂಡಮಾರುತ ಅಪ್ಪಳಿಸುವ ಪರಿಣಾಮವಾಗಿ ನೆರೆಯ ರಾಜ್ಯವಾದ ಕರ್ನಾಟಕದಲ್ಲೂ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ

Like us on Facebook  The New India Times

POPULAR  STORIES :

ಇನ್ಮುಂದೆ ಚಿತ್ರ ಮಂದಿರಗಳಲ್ಲಿ ರಾಷ್ಟ್ರಗೀತೆ, ರಾಷ್ಟ್ರಧ್ವಜ ಪ್ರದರ್ಶನ ಕಡ್ಡಾಯ : ಸುಪ್ರೀಕೋರ್ಟ್‍ನ ಮಹತ್ವದ ಆದೇಶ..!

ಯಶ್-ರಾಧಿಕಾ ಪಂಡಿತ್ ಎಂಗೇಜ್‍ಮೆಂಟ್ ವಿಡಿಯೋ ರಿಲೀಸ್.!

ಚಿನ್ನದ ಬೆಲೆ ದಿಢೀರ್ ಕುಸಿತ..!

ತಮಿಳು ಚಿತ್ರ ನಟ ಧನುಷ್ ತಮ್ಮ ಮಗನೆಂದು ಮುಧುರೈ ದಂಪತಿ ಕೊರ್ಟ್‍ಗೆ ದೂರು..!

500ರೂ. ಹೊಸ ನೋಟಿನಲ್ಲಿ ತಪ್ಪು: ಆರ್‍ಬಿಐ ಸ್ಪಷ್ಟನೆ

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...