ಧನಂಜಯ್ ಹೊಸ ಸಿನಿಮಾ ಅನೌನ್ಸ್

Date:

ಡಾಲಿ ಧನಂಜಯ್ ಈಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ . ಇತ್ತೀಚೆಗಷ್ಟೇ ಡಾಲಿ ನಟನೆಯ ಮಾನ್ಸೂನ್ ರಾಗ ರಿಲೀಸ್ ಆಗಿದ್ದು, ಸದ್ಯ ತೋತಾಪುರಿ, ಹೆಡ್ ಬುಷ್, ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ ಸಿನಿಮಾಗಳ ರಿಲೀಸ್ ಗೆ ಎದುರು ನೋಡ್ತಿದ್ದಾರೆ. ಇದರ ಜೊತೆಗೆ ಹೊಯ್ಸಳ, ಪ್ಯಾನ್ ಇಂಡಿಯಾ ಸಿನಿಮಾ ಪುಷ್ಪ-2 ಚಿತ್ರದಲ್ಲಿಯೂ ಅಭಿನಯಿಸುತ್ತಿರುವ ಧನಂಜಯ್ ಈಗ ಹೊಸ ಸಿನಿಮಾ ಮಾಡುತ್ತಿದ್ದಾರೆ .

ಪುಷ್ಪ ಸಿನಿಮಾ ಮೂಲಕ ತೆಲುಗು ಸಿನಿಲೋಕಕ್ಕೂ ಪರಿಚಿತರಾದ ಡಾಲಿ ಈಗ ಬಹುಭಾಷಾ ನಟ. ಹೀಗಾಗಿ ಧನಂಜಯ್ ಗೆ ಬೇಡಿಕೆ ಹೆಚ್ಚಿದ್ದು, ಇದೀಗ ಕನ್ನಡ ಹಾಗೂ ತೆಲುಗು ಎರಡು ಭಾಷೆ ಚಿತ್ರಕ್ಕೆ ಡಾಲಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇದು ಡಾಲಿ ಧನಂಜಯ್ ನಟಿಸಲಿರುವ 26ನೇ ಸಿನಿಮಾ. ಈ ಚಿತ್ರದಲ್ಲಿ ಧನಂಜಯ್ ಜೊತೆಗೆ ತೆಲುಗಿನ ಪ್ರತಿಭಾನ್ವಿತ ನಟ ಸತ್ಯದೇವ್ ಕೂಡ ಮುಖ್ಯಭೂಮಿಕೆಯಲ್ಲಿ ಬಣ್ಣ ಹಚ್ಚಿದ್ದಾರೆ. ವಿಶೇಷ ಅಂದರೆ ಇದು ಸತ್ಯದೇವ್ ನಟಿಸುತ್ತಿರುವ 26ನೇ ಕೂಡ ಹೌದು..

ಈ ಹಿಂದೆ ತೆಲುಗಿನಲ್ಲಿ ಪೆಂಗ್ವಿನ್ ಸಿನಿಮಾ ಮಾಡಿದ್ದ ಈಶ್ವರ್ ಕಾರ್ತಿಕ್ ಡಾಲಿ-ಸತ್ಯದೇವ್ ಬಣ್ಣ ಹಚ್ಚಿರುವ 26ನೇ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದಾರೆ. ಕ್ರೈಮ್ ಕಥೆಯನ್ನೊಳಗೊಂಡ ಈ ಚಿತ್ರವನ್ನು ಓಲ್ಡ್‌ ಟೌನ್ ಪಿಕ್ಚರ್ಸ್ ಸಂಸ್ಥೆಯಡಿ ಬಾಲ ಸುಂದರಂ ಮತ್ತು ದಿನೇಶ್ ಸುಂದರಂ ನಿರ್ಮಾಣ ಮಾಡುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...