No menu items!
18.3 C
Munich
Sunday, August 2, 2026

ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ನಿಗದಿ: ಅ 11ಕ್ಕೆ ಉದ್ಘಾಟನೆ, 21ಕ್ಕೆ ಜಂಬೂಸವಾರಿ

Must read

ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ನಿಗದಿ: ಅ 11ಕ್ಕೆ ಉದ್ಘಾಟನೆ, 21ಕ್ಕೆ ಜಂಬೂಸವಾರಿ

ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ವೇಳಾಪಟ್ಟಿ ಅಂತಿಮಗೊಂಡಿದ್ದು, ಅಕ್ಟೋಬರ್ 11ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ರಾಜ್ಯ ಸರ್ಕಾರ ಈ ಬಾರಿಯ ದಸರಾ ಕಾರ್ಯಕ್ರಮಗಳ ದಿನಾಂಕವನ್ನು ನಿಗದಿಪಡಿಸಿದೆ.

ದಸರಾ ಸಿದ್ಧತೆಗಳ ಭಾಗವಾಗಿ ಜುಲೈ 26ರಂದು ಗಜಪಯಣಕ್ಕೆ ಚಾಲನೆ ನೀಡಲಾಗುತ್ತದೆ. ಅರಮನೆ ಆನೆಗಳು ನಾಗರಹೊಳೆ ಅರಣ್ಯದಿಂದ ಮೈಸೂರಿಗೆ ಆಗಮಿಸುವ ಮೂಲಕ ದಸರಾ ಸಂಭ್ರಮಕ್ಕೆ ಮುನ್ನುಡಿ ಬರೆಯಲಿವೆ.

ಅಕ್ಟೋಬರ್ 21ರಂದು ವಿಜಯದಶಮಿ ಅಂಗವಾಗಿ ಐತಿಹಾಸಿಕ ಜಂಬೂಸವಾರಿ ನಡೆಯಲಿದ್ದು, ಅಂದು ಸಂಜೆ 4:10ರ ಮೀನಾ ಲಗ್ನದಲ್ಲಿ ಮುಖ್ಯಮಂತ್ರಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನರಾಗಿರುವ ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.

ಈ ಬಾರಿಯ ದಸರಾ ಉದ್ಘಾಟಕರ ಆಯ್ಕೆಯ ಅಧಿಕಾರವನ್ನು ಮುಖ್ಯಮಂತ್ರಿ ವಹಿಸಿಕೊಳ್ಳುವ ಸಾಧ್ಯತೆ ಇದೆ. ಉದ್ಘಾಟಕರ ಹೆಸರನ್ನು ಶೀಘ್ರದಲ್ಲೇ ಸರ್ಕಾರ ಅಧಿಕೃತವಾಗಿ ಪ್ರಕಟಿಸುವ ನಿರೀಕ್ಷೆಯಿದೆ.

- Advertisement -spot_img

More articles

- Advertisement -spot_img

Latest article