ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಆಟೋ ಚಾಲಕನಿಗೆ ಸಾರ್ವಜನಿಕರು ಥಳಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಮಂಜುನಾಥ್ ಆರೋಪಿ. ಈತ ಯುವತಿಯನ್ನು ನಗರದ ಹೊರವಲಯದ ಬೈಪಾಸ್ ಬಳಿ ಕರೆತಂದು ಅಸಭ್ಯವಾಗಿ ವರ್ತಿಸಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಪ್ರಶ್ನಿಸಿದಾಗ ಉತ್ತರಿಸಲಾಗದೆ ತಡವರಿಸಿದ್ದಾನೆ. ತನಗೆ ಈತ ಕಿರುಕುಳು ನೀಡಿರುವುದಾಗಿ ಯುವತಿ ತಿಳಿಸಿದ್ದಾಳೆ.
ಬಳಿಕ ಯುವತಿ ಮತ್ತು ಸ್ಥಳೀಯರು ಚಾಲಕನಿಗೆ ಚಪ್ಪಲಿಯಿಂದ ಥಳಿದಿದ್ದಾರೆ.