No menu items!
6.1 C
Munich
Tuesday, May 12, 2026

ಮಧ್ಯದ ಬೆರಳು ತೋರಿಸಿ ಅಸಭ್ಯ ವರ್ತನೆ; RCB ಆಟಗಾರ ಟಿಮ್ ಡೇವಿಡ್ಗೆ ಐಪಿಎಲ್ ದಂಡ

Must read

ಮಧ್ಯದ ಬೆರಳು ತೋರಿಸಿ ಅಸಭ್ಯ ವರ್ತನೆ; RCB ಆಟಗಾರ ಟಿಮ್ ಡೇವಿಡ್ಗೆ ಐಪಿಎಲ್ ದಂಡ

ರಾಯ್ಪುರ: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಅಸಭ್ಯ ಸನ್ನೆ ಪ್ರದರ್ಶಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಟಿಮ್ ಡೇವಿಡ್ಗೆ ಐಪಿಎಲ್ ಆಡಳಿತ ಮಂಡಳಿ ಶಿಸ್ತು ಕ್ರಮ ಕೈಗೊಂಡಿದೆ. ಪಂದ್ಯ ಸಂಭಾವನೆಯ ಶೇ.30ರಷ್ಟು ದಂಡ ವಿಧಿಸುವ ಜೊತೆಗೆ ಎರಡು ಡಿಮೆರಿಟ್ ಅಂಕಗಳನ್ನು ನೀಡಲಾಗಿದೆ.
ಭಾನುವಾರ ರಾಯ್ಪುರದ ಶಾಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಆರ್ಸಿಬಿ ಕೊನೆಯ ಎಸೆತದಲ್ಲಿ ಗೆಲುವು ಸಾಧಿಸಿತ್ತು.
ಆರ್ಸಿಬಿ ಇನಿಂಗ್ಸ್ನ ಅಂತಿಮ ಕ್ಷಣಗಳಲ್ಲಿ ತೀವ್ರ ಉದ್ವಿಗ್ನತೆ ನಡುವೆ ಗೆಲುವು ದಾಖಲಿಸಿದ ಸಂದರ್ಭದಲ್ಲಿ ಪೆವಿಲಿಯನ್ನಲ್ಲಿ ಕುಳಿತಿದ್ದ ಟಿಮ್ ಡೇವಿಡ್ ಅಸಭ್ಯವಾಗಿ ಮಧ್ಯದ ಬೆರಳನ್ನು ತೋರಿಸಿ ಸಂಭ್ರಮ ವ್ಯಕ್ತಪಡಿಸಿದ್ದರು.
ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿ ವ್ಯಾಪಕ ಟೀಕೆಗೆ ಗುರಿಯಾಗಿತ್ತು.
ಘಟನೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿದ ಐಪಿಎಲ್ ಆಡಳಿತ ಮಂಡಳಿ, ಟಿಮ್ ಡೇವಿಡ್ ಅವರ ವರ್ತನೆ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.6ರ ಉಲ್ಲಂಘನೆಯಾಗಿದೆ ಎಂದು ತಿಳಿಸಿದೆ.
ಈ ನಿಯಮದ ಪ್ರಕಾರ ಆಕ್ಷೇಪಾರ್ಹ ಅಥವಾ ಅಸಭ್ಯ ಸನ್ನೆ ಪ್ರದರ್ಶಿಸುವುದು ಗಂಭೀರ ಶಿಸ್ತುಲಂಘನೆ ಎಂದು ಪರಿಗಣಿಸಲಾಗುತ್ತದೆ.
ವಿಚಾರಣೆ ವೇಳೆ ಟಿಮ್ ಡೇವಿಡ್ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಇದನ್ನಾಧರಿಸಿ ಐಪಿಎಲ್ ಆಡಳಿತ ಮಂಡಳಿ ಅವರ ಪಂದ್ಯ ಸಂಭಾವನೆಯ ಶೇ.30ರಷ್ಟು ದಂಡ ವಿಧಿಸಿದ್ದು, ಜೊತೆಗೆ ಎರಡು ಡಿಮೆರಿಟ್ ಅಂಕಗಳನ್ನು ದಾಖಲಿಸಿದೆ.
ಆರ್ಸಿಬಿಯ ಮಹತ್ವದ ಗೆಲುವಿನ ನಡುವೆಯೇ ಟಿಮ್ ಡೇವಿಡ್ ಅವರ ಈ ವರ್ತನೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

- Advertisement -spot_img

More articles

- Advertisement -spot_img

Latest article