No menu items!
16.8 C
Munich
Wednesday, August 26, 2026

ಜಿಲ್ಲಾಧಿಕಾರಿ ವಿರುದ್ಧ ವಿವಾದಾತ್ಮಕ ಹೇಳಿಕೆ ಪ್ರಕರಣ: ಎನ್. ರವಿಕುಮಾರ್ಗೆ ₹500 ದಂಡ, ಷರತ್ತುಬದ್ಧ ಜಾಮೀನು!

Must read

ಜಿಲ್ಲಾಧಿಕಾರಿ ವಿರುದ್ಧ ವಿವಾದಾತ್ಮಕ ಹೇಳಿಕೆ ಪ್ರಕರಣ: ಎನ್. ರವಿಕುಮಾರ್ಗೆ ₹500 ದಂಡ, ಷರತ್ತುಬದ್ಧ ಜಾಮೀನು!

ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ನ್ಯಾಯಾಲಯಕ್ಕೆ ಖುದ್ದು ಹಾಜರಾದ ರವಿಕುಮಾರ್ ಅವರಿಗೆ ₹1 ಲಕ್ಷದ ವೈಯಕ್ತಿಕ ಬಾಂಡ್ ಹಾಗೂ ₹10 ಸಾವಿರ ಶ್ಯೂರಿಟಿ ಆಧಾರದ ಮೇಲೆ ಜಾಮೀನು ನೀಡಲಾಗಿದೆ. ಭವಿಷ್ಯದಲ್ಲಿ ಯಾವುದೇ ರೀತಿಯ ದ್ವೇಷ ಭಾಷಣ, ಪ್ರಚೋದನಕಾರಿ ಅಥವಾ ಅವಹೇಳನಕಾರಿ ಹೇಳಿಕೆಗಳನ್ನು ನೀಡಬಾರದು ಎಂದು ನ್ಯಾಯಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಹಿಂದಿನ ವಿಚಾರಣೆಗೆ ನ್ಯಾಯಾಲಯಕ್ಕೆ ಗೈರುಹಾಜರಾಗಿದ್ದ ಹಿನ್ನೆಲೆಯಲ್ಲಿ ರವಿಕುಮಾರ್ ಅವರಿಗೆ ₹500 ದಂಡವನ್ನೂ ವಿಧಿಸಲಾಗಿದೆ.
ಏನಿದು ಪ್ರಕರಣ?
2025ರ ಮೇ 24ರಂದು ಕಲಬುರಗಿಯಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ್ದ ಎನ್. ರವಿಕುಮಾರ್, ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ಅವರು ಕಾಂಗ್ರೆಸ್ ಸರ್ಕಾರದ ಪ್ರಭಾವಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದರು. ಅಲ್ಲದೆ, ಅವರು ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿನ ಅಧಿಕಾರಿಯಾಗಿದ್ದಾರೋ ಗೊತ್ತಿಲ್ಲ ಎಂಬ ರೀತಿಯ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ರವಿಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಬಳಿಕ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದ ರವಿಕುಮಾರ್, ವಿವಾದಕ್ಕೆ ಕಾರಣವಾದ ಹೇಳಿಕೆಗಾಗಿ ಕ್ಷಮೆಯಾಚಿಸಿದ್ದರು. ಇದೀಗ ಪ್ರಕರಣದ ವಿಚಾರಣೆ ಮುಂದುವರಿದಿದ್ದು, ನ್ಯಾಯಾಲಯವು ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿದೆ.

- Advertisement -spot_img

More articles

- Advertisement -spot_img

Latest article