No menu items!
26.9 C
Munich
Monday, June 8, 2026

ನಾನು 2013ರಲ್ಲಿ ಸೋತದ್ದರಿಂದಲೇ ಸಿದ್ದರಾಮಯ್ಯ ಸಿಎಂ ಆದರು: ಡಿಸಿಎಂ ಪರಮೇಶ್ವರ್

Must read

ನಾನು 2013ರಲ್ಲಿ ಸೋತದ್ದರಿಂದಲೇ ಸಿದ್ದರಾಮಯ್ಯ ಸಿಎಂ ಆದರು: ಡಿಸಿಎಂ ಪರಮೇಶ್ವರ್

ತುಮಕೂರು: ರಾಜಕೀಯಕ್ಕೆ ಪ್ರವೇಶಿಸುವ ಬಗ್ಗೆ ಯಾವುದೇ ಕನಸು ಅಥವಾ ಯೋಜನೆ ತಮ್ಮ ಜೀವನದಲ್ಲಿ ಇರಲಿಲ್ಲ. ವಿದ್ಯಾರ್ಥಿ ಜೀವನದಲ್ಲಿ ರಾಜಕೀಯ ಚಟುವಟಿಕೆಗಳಿಂದ ದೂರವಿದ್ದು, ವ್ಯಾಸಂಗದತ್ತ ಹೆಚ್ಚಿನ ಗಮನ ಹರಿಸಿದ್ದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ತಮ್ಮ ರಾಜಕೀಯ ಪಯಣದ ಹಲವು ಮಹತ್ವದ ಕ್ಷಣಗಳನ್ನು ನೆನಪಿಸಿಕೊಂಡರು.
“ಕಾಲೇಜು ದಿನಗಳಲ್ಲಿ ನಾನು ಯೂತ್ ಕಾಂಗ್ರೆಸ್ ಅಥವಾ ಎನ್ಎಸ್ಯುಐ ಚಟುವಟಿಕೆಗಳಲ್ಲಿ ಭಾಗಿಯಾಗಿರಲಿಲ್ಲ. ಓದಿನಲ್ಲೇ ನಿರತರಾಗಿದ್ದೆ. ಆದರೆ ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ನಮ್ಮ ಕ್ಯಾಂಪಸ್ಗೆ ಭೇಟಿ ನೀಡಿದ್ದರು. ಯುವಜನರಿಗೆ ಅವರು ನೀಡಿದ ಕರೆ ಮತ್ತು ಸಂದೇಶದಿಂದ ಪ್ರೇರಿತನಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದೆ. ಅದೇ ನನ್ನ ರಾಜಕೀಯ ಜೀವನದ ಆರಂಭವಾಯಿತು” ಎಂದು ಹೇಳಿದರು.
ರಾಜಕೀಯ ಕ್ಷೇತ್ರದಲ್ಲಿ ನಾಲ್ಕು ದಶಕಗಳ ಪಯಣವನ್ನು ಪೂರ್ಣಗೊಳಿಸಿರುವುದಾಗಿ ತಿಳಿಸಿದ ಪರಮೇಶ್ವರ್, “40 ವರ್ಷಗಳ ರಾಜಕೀಯ ಜೀವನದಲ್ಲಿ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದೆ. ಸ್ವಲ್ಪವಾದರೂ ಕೆಲಸ ಮಾಡಿದ್ದರಿಂದಲೇ ಜನರು ಗುರುತಿಸಿದ್ದಾರೆ. ಇಲ್ಲದಿದ್ದರೆ ಇಷ್ಟು ವರ್ಷ ಸಾರ್ವಜನಿಕ ಜೀವನದಲ್ಲಿ ಉಳಿಯುವುದು ಸಾಧ್ಯವಾಗುತ್ತಿರಲಿಲ್ಲ” ಎಂದರು.
ಪಕ್ಷವು ತಮಗೆ ವಿವಿಧ ಹಂತಗಳಲ್ಲಿ ಅನೇಕ ಜವಾಬ್ದಾರಿಗಳನ್ನು ನೀಡಿದೆ ಎಂದು ಹೇಳಿದ ಅವರು, “ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಹಿಡಿದು ಎಐಸಿಸಿ ವರ್ಕಿಂಗ್ ಕಮಿಟಿ ಸದಸ್ಯತ್ವದವರೆಗೆ ಹಲವು ಪ್ರಮುಖ ಹುದ್ದೆಗಳನ್ನು ಪಕ್ಷ ನನಗೆ ನೀಡಿದೆ. 2018ರಲ್ಲಿ ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾಗುವ ಅವಕಾಶವೂ ಸಿಕ್ಕಿತ್ತು” ಎಂದು ನೆನಪಿಸಿಕೊಂಡರು.
2013ರ ವಿಧಾನಸಭಾ ಚುನಾವಣೆಯ ಬಗ್ಗೆ ಮಾತನಾಡಿದ ಪರಮೇಶ್ವರ್, “ಆ ಚುನಾವಣೆಯಲ್ಲಿ ನಾನು ಸೋತಿದ್ದೆ. ಬಹುಶಃ ಆಗ ನಾನು ಗೆದ್ದಿದ್ದರೆ ರಾಜಕೀಯ ಬೆಳವಣಿಗೆಗಳು ಬೇರೆ ರೀತಿಯಾಗಿರಬಹುದಿತ್ತು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗುತ್ತಿರಲಿಲ್ಲವೋ ಎನ್ನುವ ಸಾಧ್ಯತೆಯೂ ಇತ್ತು. ಆದರೆ ನನ್ನ ಸೋಲಿನ ನಂತರ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗುವ ಅವಕಾಶ ದೊರೆಯಿತು” ಎಂದು ಹೇಳಿದರು.
2018ರ ರಾಜಕೀಯ ಬೆಳವಣಿಗೆಗಳನ್ನು ಉಲ್ಲೇಖಿಸಿದ ಅವರು, “ಆ ಚುನಾವಣೆಯಲ್ಲಿ ಕಾಂಗ್ರೆಸ್ 80 ಸ್ಥಾನಗಳನ್ನು ಗೆದ್ದಿತ್ತು. ನಂತರ ಜೆಡಿಎಸ್ ಜೊತೆ ಸೇರಿ ಸಮ್ಮಿಶ್ರ ಸರ್ಕಾರ ರಚಿಸಲಾಯಿತು. ಆ ಸಂದರ್ಭದಲ್ಲಿ ನನ್ನನ್ನೂ ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸಬಹುದಿತ್ತು. ಆದರೆ ರಾಜಕೀಯದಲ್ಲಿ ತೀರ್ಮಾನಗಳು ಹೇಗೆ ಆಗುತ್ತವೆ ಎಂಬುದು ಯಾರಿಗೂ ಮುಂಚಿತವಾಗಿ ಗೊತ್ತಾಗುವುದಿಲ್ಲ. ಅಂತಿಮವಾಗಿ ಕುಮಾರಸ್ವಾಮಿ ಮುಖ್ಯಮಂತ್ರಿ ಆದರು” ಎಂದು ಹೇಳಿದರು.

- Advertisement -spot_img

More articles

- Advertisement -spot_img

Latest article