No menu items!
16 C
Munich
Thursday, July 2, 2026

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರಮುಖ ಸಾಕ್ಷಿಗೆ ಬೆದರಿಕೆ ಆರೋಪ – ‘ಡಿ ಕಂಪನಿ’ ಸದಸ್ಯರ ವಿರುದ್ಧ ಎಫ್‌ಐಆರ್, ಮೂವರ ಬಂಧನ

Must read

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರಮುಖ ಸಾಕ್ಷಿಗೆ ಬೆದರಿಕೆ ಆರೋಪ – ‘ಡಿ ಕಂಪನಿ’ ಸದಸ್ಯರ ವಿರುದ್ಧ ಎಫ್‌ಐಆರ್, ಮೂವರ ಬಂಧನ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಸಂಬಂಧಿಸಿದಂತೆ ಮತ್ತೊಂದು ಬೆಳವಣಿಗೆ ನಡೆದಿದೆ. ಪ್ರಕರಣದ ಪ್ರಮುಖ ಸಾಕ್ಷಿದಾರನಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ದರ್ಶನ್ ಅಭಿಮಾನಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ 49ನೇ ಸಾಕ್ಷಿದಾರರಾದ ಸಂದೀಪ್ ಅವರಿಗೆ ನ್ಯಾಯಾಲಯದಲ್ಲಿ ಸಾಕ್ಷಿ ನೀಡದಂತೆ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತು ಸಂದೀಪ್ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ ಬಳಿಕ, ಅವರಿಗೆ ಪೊಲೀಸ್ ರಕ್ಷಣೆ ಒದಗಿಸಲಾಗಿದ್ದು, ಬೆದರಿಕೆ ಹಾಕಿದ ಆರೋಪಿಗಳ ಪತ್ತೆಗೆ ಕಾಮಾಕ್ಷಿಪಾಳ್ಯ ಪೊಲೀಸರು ತನಿಖೆ ಆರಂಭಿಸಿದ್ದರು.
ತನಿಖೆಯ ಭಾಗವಾಗಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ‘ಡಿ ಕಂಪನಿ’ ಸದಸ್ಯರ ವಿರುದ್ಧ ಪ್ರಕರಣ ದಾಖಲಾಗಿದ್ದು, ವೇಣು, ಸುಹಾಸ್ ಹಾಗೂ ಪುನೀತ್ ಅವರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಪುನೀತ್ ‘ಡಿ ಕಂಪನಿ’ ಫ್ಯಾನ್ ಪೇಜ್ ನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದೆ. ಸುಹಾಸ್ ಮತ್ತು ವೇಣು ತುಮಕೂರಿನ ದರ್ಶನ್ ಅಭಿಮಾನಿ ಸಂಘದ ಸದಸ್ಯರಾಗಿದ್ದಾರೆ ಎನ್ನಲಾಗಿದೆ.
ಆರೋಪದ ಪ್ರಕಾರ, ಸುಹಾಸ್ ಮಾತುಕತೆ ನಡೆಸುವ ನೆಪದಲ್ಲಿ ಸಂದೀಪ್ ಅವರನ್ನು ಕರೆಸಿಕೊಂಡು ಕಾರಿನಲ್ಲಿ ಸುತ್ತಾಡಿಸಿ, ನ್ಯಾಯಾಲಯದಲ್ಲಿ ಸಾಕ್ಷಿ ನೀಡದಂತೆ ಒತ್ತಡ ಹೇರಿದ್ದಾನೆ. ಸಂದೀಪ್ ಅದಕ್ಕೆ ಒಪ್ಪದಿದ್ದಾಗ ಜೀವ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.
ಪ್ರಸ್ತುತ ಬಂಧಿತ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

- Advertisement -spot_img

More articles

- Advertisement -spot_img

Latest article