No menu items!
24.1 C
Munich
Thursday, June 4, 2026

ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ʼಗೆ ಕನಿಷ್ಟ ಒಂದು ವರ್ಷ ಜೈಲು ಖಾಯಂ

Must read

ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ʼಗೆ ಕನಿಷ್ಟ ಒಂದು ವರ್ಷ ಜೈಲು ಖಾಯಂ

ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದೆ. ನ್ಯಾಯಪೀಠವು ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ವಿಚಾರಣಾ ಪ್ರಕ್ರಿಯೆಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದೆ.
ಈ ಹಿನ್ನೆಲೆಯಲ್ಲಿ ಮುಂದಿನ ಮೇ 15ರವರೆಗೆ ದರ್ಶನ್ ಅವರಿಗೆ ಜೈಲಿನಲ್ಲಿ ಇರಬೇಕಾದ ಪರಿಸ್ಥಿತಿ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.
ನ್ಯಾಯಮೂರ್ತಿಗಳಾದ ಜಸ್ಟಿಸ್ ಪರ್ದಿವಾಲಾ ಮತ್ತು ಜಸ್ಟಿಸ್ ವಿಜಯ್ ಬಿಷ್ನೋಯಿ ಅವರ ಪೀಠದಲ್ಲಿ ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ದರ್ಶನ್ ಪರ ವಕೀಲರು, ಜೈಲಿನಲ್ಲಿ ಅವರನ್ನು ಕ್ವಾರಂಟೈನ್ ಸೆಲ್ನಲ್ಲಿ ಇರಿಸಲಾಗಿದ್ದು, ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಕೇವಲ ಗ್ಲಾಸ್ ತಡೆಗೋಡೆ ಮೂಲಕ ಮಾತ್ರ ಅವಕಾಶ ನೀಡಲಾಗುತ್ತಿದೆ ಎಂದು ವಾದ ಮಂಡಿಸಿದರು.
ಆದರೆ ನ್ಯಾಯಪೀಠವು, ಕ್ವಾರಂಟೈನ್ ಸೆಲ್ ಕೂಡ ಜೈಲಿನ ಭಾಗವೇ ಆಗಿದ್ದು, ವಿಶೇಷ ಸೌಲಭ್ಯ ನೀಡುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಜೈಲು ನಿಯಮಾವಳಿಗಳ ಪ್ರಕಾರ ಅಗತ್ಯ ಸೌಲಭ್ಯಗಳನ್ನು ಮಾತ್ರ ನೀಡಬೇಕು ಎಂದು ಕೋರ್ಟ್ ಸೂಚಿಸಿದೆ.
ಪ್ರಕರಣದಲ್ಲಿ ಒಟ್ಟು 272 ಸಾಕ್ಷಿಗಳಿದ್ದು, ಇದುವರೆಗೆ ಕೇವಲ 10 ಸಾಕ್ಷಿಗಳ ವಿಚಾರಣೆ ಮಾತ್ರ ಪೂರ್ಣಗೊಂಡಿದೆ ಎಂದು ನ್ಯಾಯಾಲಯ ಗಮನಿಸಿದೆ. ವಿಚಾರಣೆ ವಿಳಂಬವಾಗುತ್ತಿರುವ ಬಗ್ಗೆ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.
ಪ್ರಾಸಿಕ್ಯೂಷನ್ ಪರ ಹಿರಿಯ ವಕೀಲರು, ಹಲವು ಆರೋಪಿಗಳ ಪರ ವಕೀಲರು ಪ್ರತಿ ಸಾಕ್ಷಿಗೆ ಹಲವಾರು ದಿನ ತೆಗೆದುಕೊಳ್ಳುತ್ತಿರುವುದರಿಂದ ಟ್ರಯಲ್ ನಿಧಾನವಾಗುತ್ತಿದೆ ಎಂದು ತಿಳಿಸಿದ್ದಾರೆ.
ಇನ್ನು 172ಕ್ಕೂ ಹೆಚ್ಚು ಸಾಕ್ಷಿಗಳ ವಿಚಾರಣೆ ಬಾಕಿ ಇರುವ ಹಿನ್ನೆಲೆಯಲ್ಲಿ, ತಕ್ಷಣ ಜಾಮೀನು ನೀಡುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ವಿಚಾರಣೆಯನ್ನು ವೇಗಗೊಳಿಸಲು ಮಹತ್ವದ ಸೂಚನೆಗಳನ್ನು ನೀಡಿದೆ.

- Advertisement -spot_img

More articles

- Advertisement -spot_img

Latest article