No menu items!
5.3 C
Munich
Wednesday, September 23, 2026

ಬೆಂಗಳೂರು: ಎಷ್ಟೇ ಅರಿವು ಮೂಡಿಸಿದರೂ ನಿಲ್ಲದ ಡ್ರಂಕ್ ಅಂಡ್ ಡ್ರೈವ್ ಪ್ರಕರಣಗಳು

Must read

ಬೆಂಗಳೂರು: ಎಷ್ಟೇ ಅರಿವು ಮೂಡಿಸಿದರೂ ನಿಲ್ಲದ ಡ್ರಂಕ್ ಅಂಡ್ ಡ್ರೈವ್ ಪ್ರಕರಣಗಳು

ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಕಳೆದ ಒಂದು ವಾರದಲ್ಲಿ ಬರೋಬ್ಬರಿ 562 ಡ್ರಂಕ್ ಅಂಡ್ ಡ್ರೈವ್ (ಡಿಡಿ) ಪ್ರಕರಣಗಳನ್ನು ದಾಖಲಿಸಿದ್ದಾರೆ.
ನಗರದ 53 ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಒಟ್ಟು 40,898 ವಾಹನಗಳನ್ನು ಪರಿಶೀಲಿಸಲಾಯಿತು. ಈ ವೇಳೆ 562 ಮಂದಿ ಮದ್ಯಪಾನ ಮಾಡಿ ವಾಹನ ಚಲಾಯಿಸಿರುವುದು ಪತ್ತೆಯಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಡ್ರಂಕ್ ಅಂಡ್ ಡ್ರೈವ್ ಕಾರ್ಯಾಚರಣೆಯ ಜೊತೆಗೆ ಅತಿ ವೇಗದ ವಾಹನ ಚಾಲನೆ ವಿರುದ್ಧವೂ ಸಂಚಾರ ಪೊಲೀಸರು ಕಾರ್ಯಾಚರಣೆ ನಡೆಸಿದರು. ಈ ವೇಳೆ 65 ವಾಹನ ಸವಾರರ ವಿರುದ್ಧ ಓವರ್ ಸ್ಪೀಡ್ ಪ್ರಕರಣ ದಾಖಲಿಸಿ, ಒಟ್ಟು ₹65 ಸಾವಿರ ದಂಡವನ್ನು ವಸೂಲಿ ಮಾಡಿದ್ದಾರೆ.

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದು ಹಾಗೂ ಅತಿ ವೇಗದಲ್ಲಿ ವಾಹನ ಚಲಾಯಿಸುವುದು ಜೀವಕ್ಕೆ ಅಪಾಯಕಾರಿಯಾಗಿದ್ದು, ಇಂತಹ ನಿಯಮ ಉಲ್ಲಂಘನೆಗಳ ವಿರುದ್ಧ ಮುಂದೆಯೂ ನಿರಂತರ ವಿಶೇಷ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಸಂಚಾರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

- Advertisement -spot_img

More articles

- Advertisement -spot_img

Latest article