ಪ್ಯಾರಾಲಿಂಪಿಕ್‍ನಲ್ಲಿ ಭಾರತಕ್ಕೆ ಬೆಳ್ಳಿಯ ಬೆಳಕು ನೀಡಿದ ದೀಪಾ..

Date:

ರಿಯೋ ಪ್ಯಾರಾಲಿಂಪಿಕ್‍ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಒಲಿದಿದೆ. ಮಹಿಳಾ ವಿಭಾಗದ ಶಾಟ್‍ಪುಟ್ ಎಫ್-53 ವಿಭಾಗದಲ್ಲಿ ಹರ್ಯಾಣದ ದೀಪಾ ಮಲ್ಲಿಕ್ ಬೆಳ್ಳಿ ಪದಕ ಗೆದ್ದು ಬೀಗಿದ್ದಾರೆ. ಈ ಮೂಲಕ ಈ ಬಾರಿಯ ಪ್ಯಾರಾ ಒಲಂಪಿಕ್‍ನಲ್ಲಿ ಭಾರತವು ಮೂರನೇ ಪದಕ ಭೇಟೆಯನ್ನಾಡಿದೆ. ಅಷ್ಟೇ ಅಲ್ಲದೇ ಪ್ಯಾರಾಲಿಂಪಿಕ್‍ನಲ್ಲಿ ಭಾರತೀಯ ವನಿತೆಯೊಬ್ಬಳು ಪದಕ ಗೆಲ್ಲುವ ಮೂಲಕ ಐತಿಹಾಸಿ ಸಾಧನೆ ಮಾಡಿದ್ದಾರೆ. ದೀಪಾಗೆ ಸಿಕ್ಕಿದ ಆರು ಪ್ರಯತ್ನಗಳಲ್ಲಿ 4.61 ಮೀಟರ್ ದೂರದವರೆಗೆ ಎಸೆಯುವ ಮೂಲಕ ಬೆಳ್ಳಿ ತಮ್ಮದಾಗಿಸಿಕೊಂಡಿದ್ದಾರೆ. ಇದರೊಂದಿಗೆ ಭಾರತ ಚಿನ್ನ, ಬೆಳ್ಳಿ, ಮತ್ತು ಕಂಚಿನ ಪದಕಗಳಲ್ಲಿ ಕ್ರಮವಾಗಿ ಒಂದೊಂದು ಪದಕಗಳನ್ನು ಪಡೆದಿದೆ.
ಹರಿಯಾಣದ ದೀಪಾಗೆ ಇದೀಗ 45 ವರ್ಷ ವಯಸ್ಸು, ತನ್ನ 17ನೇ ವಯಸ್ಸಿನಲ್ಲಿ ಪಾರ್ಶುವಾಯುಗೆ ಬಲಿಯಾದ ದೀಪಾ ಅಲ್ಲಿಂದ ಅವರ ಜೀವನ ಶೈಲಿಯೇ ಬದಲಾಗಿ ಹೋಗಿತ್ತು. ಪಾಶ್ರ್ವವಾಯುವಿನಿಂದ ಚೇತರಿಸಿಕೊಳ್ಳಲು ಸುಲಭದ ಮಾತಾಗಿರಲಿಲ್ಲವಾದರೂ ಸುಮಾರು 35 ಬಾರಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಪರಿಣಾಮವಾಗಿ ದೀಪಾ ಅವರ ಸೊಂಟ ಹಾಗೂ ಕಾಲಿನ ಮೇಲೆ ಸುಮಾರು 183 ಒಲಿಗೆಗಳನ್ನು ಹಾಕಲಾಗಿತ್ತು. ಇಷ್ಟೆಲ್ಲಾ ನೋವು ಬಿದ್ದರೂ ಸಹ ತಮ್ಮ ಸಾಧನೆಯನ್ನು ಎಂದೂ ನಿಲ್ಲಿಸಲಿಲ್ಲ ಎಂಬುದೇ ವಿಷೇಶ. ರಾಜ್ಯ ಮಟ್ಟದ ಕೂಟದಲ್ಲಿ ದೀಪಾ ಒಟ್ಟು 47 ಚಿನ್ನ, 5 ಬೆಳ್ಳಿ 2 ಕಂಚಿನ ಪದಕಗಳನ್ನು ಗೆದ್ದಿದ್ದಾರೆ. ಅಲ್ಲದೇ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಯನ್ನು ದೀಪಾ ಅವರು ಪಡೆದುಕೊಂಡಿದ್ದಾರೆ.

POPULAR  STORIES :

ಸೀದಾ ಮನೆಗೆ ಬಂದ ನಾನು ನಡೆದ ಘಟನೆಯನ್ನೆಲ್ಲಾ ನನ್ನ ಮಗನ ಬಳಿ ಹೇಳಿಕೊಂಡೆ..

ಬರ್ತ್ ಡೇ ದಿನ ನನ್ನ ಜೊತೆ ಸ್ವಿಮ್ ಮಾಡಲು ಬರ್ತೀರಾ: ಕ್ರಿಸ್ ಗೇಲ್..!

ಈ ಪ್ರಾಧ್ಯಾಪಕರ ವಯಸ್ಸು 55.. ಆದ್ರೆ ಅವರು ಪಡೆದಿರುವ ಪದವಿಗಳ ಸಂಖ್ಯೆ ಎಷ್ಟು ಗೊತ್ತಾ…?

ಗಣಪತಿ ವಿಸರ್ಜನಾ ಸಮಯದ ದುರಂತದಲ್ಲಿ 12 ಮಂದಿ ಕಣ್ಣೆದುರೇ ಮುಳುಗಿದ ಹೃದಯವಿದ್ರಾವಕ ವಿಡಿಯೋ…

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...