ಬಾಲಿವುಡ್ ನಟ ರಣವೀರ್ ಸಿಂಗ್ ಮತ್ತು ನಟಿ ದೀಪಿಕಾ ಪಡುಕೋಣೆ ಮದುವೆ ಇದೇ ನವೆಂಬರ್ 20ರಂದು ಇಟಲಿಯಲ್ಲಿ ನಡೆಯಲಿದೆ ಎಂದು ವರದಿಯಾಗಿದೆ.
ಬಾಲಿವುಡ್ ನ ಈ ಜೋಡಿ ಮದುವೆ ಬಗ್ಗೆ ಕಳೆದ ಒಂದು ವರ್ಷದಿಂದ ಸುದ್ದಿಗಳು ಹರಿದಾಡುತ್ತಲೇ ಇವೆ. ಇದೀಗ ಇಟಲಿಯ ಕೋಮೋ ಸಿಟಿಯಲ್ಲಿ ಮದುವೆ ನಡೆಯಲಿದ್ದು, ಬೆಂಗಳೂರು ಅಥವಾ ದೆಹಲಿ ಅಥವಾ ಮುಂಬೈನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿದು ಬಂದಿದೆ .
ಮದುವೆಯಲ್ಲಿ ಕುಟುಂಬಸ್ಥರು ಮತ್ತು ಆಪ್ತರು ಪಾಲ್ಗೊಳ್ಳಲಿದ್ದಾರೆ. ಮದುವೆಯಲ್ಲಿ ಪಾಲ್ಗೊಳ್ಳುವವರ ಸಂಖ್ಯೆ ಕೇವಲ 30ಅಂತೆ. ಆದರೆ ಈ ಬಗ್ಗೆ ದೀಪಿಕಾ ಹಾಗೂ ರಣವೀರ್ ಎಲ್ಲೂ ಅಧಿಕೃತ ಹೇಳಿಕೆ ಕೊಟ್ಟಿಲ್ಲ.