ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಖಾಸಗಿ ಬಸ್! 14 ಜನರಿಗೆ ಗಂಭೀರ ಗಾಯ
ದಾವಣಗೆರೆ: ದಾವಣಗೆರೆಯ ಜಗಳೂರು ಪಟ್ಟಣದ ಕೆರೆ ಏರಿಯ ಮೇಲೆ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್‌ವೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದಿದೆ. ಬಸ್ಸಿನಲ್ಲಿದ್ದ 14 ಜನರಿಗೆ ಗಂಭೀರ ಗಾಯವಾಗಿದೆ. ಗಾಯಳುಗಳನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆ, ಜಗಳೂರು ತಾಲೂಕಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೂವಿನಹಡಗಲಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ಸು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದೆ. ಬಹುತೇಕರು ಜಗಳೂರು ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗಳಿಗೆ ತೆರಳಿದ್ದಾರೆ. ಗಂಭೀರ ಗಾಯಗೊಂಡ ಇಬ್ಬರಿಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.