ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಯನ್ನು ಭಾರತ ತನ್ನದಾಗಿಸಿಕೊಂಡಿದೆ. ಆದರೆ. ಕ್ರಿಕೆಟ್ ಅಭಿಮಾನಿಗಳಿಗೆ ಬೇಸರದ ಸಂಗತಿ ಎಂದರೆ ಟಿ20 ಮಾದರಿಯಿಂದ ಹಿರಿಯ ಕ್ರಿಕೆಟಿಗ ಎಂ.ಎಸ್ ಧೋನಿ ಅವರನ್ನು ಕೈ ಬಿಟ್ಟಿರೋದು.
ಈ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಸತ್ಯ ಬಿಚ್ಚಿಟ್ಟಿದ್ದಾರೆ.
ರಿಷಬ್ ಪಂತ್‌ಗೆ ಹೆಚ್ಚಿನ ಅವಕಾಶ ನೀಡಲು ಟಿ20 ಮಾದರಿಯಿಂದ ಧೋನಿಯನ್ನ ಹೊರಗಿಡಲಾಗಿದೆ ಎಂದು ಕೊಹ್ಲಿ ಹೇಳಿದ್ದಾರೆ.
ಧೋನಿ ಟೀಂ ಇಂಡಿಯಾದ ಸದಸ್ಯ. ಟಿ20ಯಿಂದ ಹೊರಗುಳಿದಿರುವ ಧೋನಿ ಏಕದಿನ ವೇಳೆಗೆ ತಂಡ ಸೇರಿಕೊಳ್ಳಲಿದ್ದಾರೆ. ಟೆಸ್ಟ್‌ನಲ್ಲಿ ಕೀಪಿಂಗ್ ಜವಾಬ್ದಾರಿ ನಿರ್ವಹಿಸೋ ರಿಷಬ್ ಪಂತ್, ನಿಗಧಿತ ಓವರ್ ಕ್ರಿಕೆಟ್‌ನಲ್ಲೂ ಅವಕಾಶ ಬೇಕಿದೆ. ಈ ವಿಚಾರವನ್ನ ಆಯ್ಕೆ ಸಮಿತಿ ಈಗಾಗಲೇ ಹೇಳಿದೆ. ಹೀಗಾಗಿ ನಾನು ಈ ಕುರಿತು ಹೆಚ್ಚೇನು ಹೇಳುವುದಿಲ್ಲ ಎಂದು ಕೊಹ್ಲಿ ಹೇಳಿದ್ದಾರೆ.