ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ.
ಇಂದು ನಡೆಯುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸನ್ ರೈಸರ್ಸ್ ಹೈದರಾಬಾದ್ ಅನ್ನು ಎದುರಿಸಲಿದೆ.
36 ವರ್ಷದ ಧೋನಿ ಈಗಾಗಲೇ ಭಾರತ ಟೆಸ್ಟ್ ತಂಡಕ್ಕೆ ರಾಜೀನಾಮೆ ನೀಡಿದ್ದಾರೆ. 2019ರ ವಿಶ್ವಕಪ್ ಬಳಿಕ ಅಂತರಾಷ್ಟ್ರೀಯ ಏಕದಿನ ಹಾಗೂ ಟಿ20ಗೂ ವಿದಾಯ ಹೇಳುವ ಸಾಧ್ಯತೆ ಇದೆ. ಇದೀಗ ಮುಂದಿನ ಐಪಿಎಲ್ ಗೂ ಗುಡ್ ಬೈ ಹೇಳುವ ಸೂಚನೆ ನೀಡಿದ್ದಾರೆ.

“ಕಳೆದ 10 ವರ್ಷಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ನಲ್ಲಿ ಆಟವಾಡಿದ್ದು, ಆ ಹಿಂದಿನ ದಿನಗಳನ್ನು ಗುರುತಿಸಿಕೊಳ್ಳುವ ಸಮಯ ಇದೀಗ ಬಂದಿದೆ ಎಂದು ಧೋನಿ ಹೇಳಿದ್ದಾರೆ.
ಸಿಎಸ್ ಕೆ ಯಲ್ಲಿ ಸದ್ಯ ಅನೇಕ ಹಿರಿಯ ಆಟಗಾರರಿದ್ದು , ಬಹುಶಃ ಅವರು ಮುಂದಿನ ವರ್ಷ ಕಣಕ್ಕಿಳಿಯುವ ಸಾಧ್ಯತೆ ತುಂಬಾ ಕಡಿಮೆ ಇದೆ. ಬರುವ ದಿನಗಳಲ್ಲಿ ನಾವು ಚುಟುಕು ಕ್ರಿಕೆಟ್ ಗೆ ಹೊಂದಿಕೊಳ್ಳುವುದು ಅಸಾಧ್ಯವಾಗಬಹುದು ಅಥವಾ ದೈಹಿಕವಾಗಿ ನಾವು ಫಿಟ್ ಇರದೇ ಹೋಗಬಹುದು ಎಂದು ಅವರು ಹೇಳಿದ್ದಾರೆ. ಈ ಮೂಲಕ ಮುಂದಿನ ಐಪಿಎಲ್ ನಲ್ಲಿ ಆಡುವುದು ಅನುಮಾನ ಎಂಬ ಸೂಚನೆ ನೀಡಿದ್ದಾರೆ.







