ಮೋದಿಯವರ ಬುರುಡೆ ಭಾಷಣ ಕೇಳುವ ಅನಿವಾರ್ಯ ಕರ್ಮ ಕನ್ನಡಿಗರದ್ದು ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಮೋದಿಯವರೆ, ಇಂದಿನ ನಿಮ್ಮ ಭಾಷಣದಲ್ಲಿ ರಾಜ್ಯ BJP ಸರ್ಕಾರದ 40% ಕಮಿಷನ್ ದಂಧೆ, PSI ಹಗರಣ, KPTCL ನೇಮಕಾತಿ ಹಗರಣ, ಉಪನ್ಯಾಸಕರ ನೇಮಕಾತಿ ಹಗರಣ, ಜ್ಯೂ.ಇಂಜಿನಿಯರ್ ನೇಮಕಾತಿ ಹಗರಣ ಹಾಗೂ ನಿಮ್ಮ ಪಕ್ಷ 2018ರ ಪ್ರಣಾಳಿಕೆಯಲ್ಲಿ 600 ವಚನ ಕೊಟ್ಟು ಒಂದನ್ನೂ ಈಡೇರಿಸದೆ ವಚನ ವಂಚನೆಯ ಬಗ್ಗೆ ಮಾತಾಡುವಿರಾ.? ನಿಮ್ಮ ಪಾರದರ್ಶಕತೆಗೆ ಸವಾಲು ಇದು.” ಎಂದು ಹೇಳಿದ್ದಾರೆ. ಮೋದಿಯವರೆ, ಇಂದಿನ ನಿಮ್ಮ ಭಾಷಣದಲ್ಲಿ ರಾಜ್ಯಕ್ಕೆ ಕೇಂದ್ರದಿಂದ GST ಬಾಕಿ ಯಾಕೆ ಕೊಟ್ಟಿಲ್ಲ, 15ನೇ ಹಣಕಾಸು ಆಯೋಗ ನೀಡಿದ್ದ ವಿಶೇಷ ಅನುಧಾನ ರಾಜ್ಯಕ್ಕೆ ಕೊಡದಿರುವುದು ಯಾಕೆ ? 2014ರಲ್ಲಿ 52 ಲಕ್ಷ ಕೋಟಿ ರೂ. ಇದ್ದ ದೇಶದ ಸಾಲ ನಿಮ್ಮ ಅಧಿಕಾರಾವಧಿಯಲ್ಲಿ 1.42 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದ್ದು ಯಾಕೆ.? ಎಂಬ ಬಗ್ಗೆ ದಯವಿಟ್ಟು ಮಾತನಾಡುವಿರಾ.?” ಎಂದು ಪ್ರಶ್ನಿಸಿದ್ದಾರೆ.