ಸಿಎಂ ಸಿದ್ದರಾಮಯ್ಯ ಅವರು ಐತಿಹಾಸಿಕ ಹಾಗೂ ದೇಶಕ್ಕೆ ಮಾದರಿ ಬಜೆಟ್ ಕೊಟ್ಟಿದ್ದಾರೆ: ಡಿಕೆ ಶಿವಕುಮಾರ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಐತಿಹಾಸಿಕ ಹಾಗೂ ದೇಶಕ್ಕೆ ಮಾದರಿ ಬಜೆಟ್ ಕೊಟ್ಟಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಐತಿಹಾಸಿಕ ಹಾಗೂ ದೇಶಕ್ಕೆ ಮಾದರಿ ಬಜೆಟ್ ಕೊಟ್ಟಿದ್ದಾರೆ.
ಮುಂದೆ ಬೇರೆ ಬೇರೆ ರಾಜ್ಯಗಳು ನಮ್ಮ ಬಜೆಟ್ ಪಾಲನೆ ಮಾಡಲಿವೆ. ಈ ಬಜೆಟ್ ಸಮಾಜದ ಎಲ್ಲಾ ವರ್ಗದವರಿಗಾಗಿ ಮಾಡಿರುವ ಬಜೆಟ್. ಈ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳಿಗೆ ಹಾಗೂ ಇದಕ್ಕೆ ಸಹಕಾರ ಕೊಟ್ಟ ನನ್ನ ಸಹೋದ್ಯೋಗಿಗಳಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.
ಇನ್ನೂ ಬ್ರ್ಯಾಂಡ್ ಬೆಂಗಳೂರಿನ ಮಹತ್ವದ ಯೋಜನೆಗಳಿಗೆ ಅನುದಾನ ನೀಡಲಾಗಿದೆ. ರಾಜಧಾನಿಯಲ್ಲಿರುವ 1.40 ಕೋಟಿ ಜನರಿಗೆ ಅನುಕೂಲವಾಗಲಿದೆ. ಟನಲ್ ರಸ್ತೆ ಆಗಿಯೇ ಆಗುತ್ತೆ.
ಮುಂಬರುವ ಎಲ್ಲಾ ಮೆಟ್ರೋ ಮಾರ್ಗಗಳಲ್ಲಿ ಡಬಲ್ ಡೆಕ್ಕರ್ ಮೇಲ್ಸೇತುವೆ ಮಾಡಲಾಗುವುದು ಪಾಲಿಕೆ ಹಾಗೂ ಬಿಎಂಆರ್ ಸಿಎಲ್ ಇದರ ವೆಚ್ಚವನ್ನು 50:50 ಅನುಪಾತದಲ್ಲಿ ಭರಿಸಲಿವೆ. ಇನ್ನು ರಾಜಕಾಲುವೆ ಅಕ್ಕಪಕ್ಕದಲ್ಲಿ 50 ಅಡಿ ಬಫರ್ ವಲಯದಲ್ಲಿ 300 ಕಿ.ಮೀ ಉದ್ದದಷ್ಟು ರಸ್ತೆ ನಿರ್ಮಾಣ ಮಾಡಲಾಗುವುದು ಎಂದರು.