ಸಕ್ಕರೆ ಉದ್ಯಮಕ್ಕೆ ಸಚಿವ ಉಮೇಶ್ ಕತ್ತಿ ನೀಡಿದ ಕೊಡುಗೆ ಮರೆಯುವಂತಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನ ಸಭೆ ಯ ಹಿರಿಯ ನಾಯಕರಾಗಿದ್ದ ಉಮೇಶ್ ಕತ್ತಿ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. 25ನೇ ವಯಸ್ಸಿಗೆ ವಿಧಾನಸಭೆ ಪ್ರವೇಶಿಸಿದ್ದ ಅವರು ಉತ್ತರ ಕರ್ನಾಟಕದ ಗಟ್ಟಿ ಧ್ವನಿಯಾಗಿದ್ದರು. ಇದ್ದುದ್ದನ್ನು ಇದ್ದಂತೆ ಹೇಳುವ ನೇರ ನಡೆ-ನುಡಿಯ ವ್ಯಕ್ತಿತ್ವ ಹೊಂದಿದ್ದ ಉಮೇಶ್ ಕತ್ತಿ ಅವರು ಜನರ ಸಮಸ್ಯೆ, ಭಾವನೆಗಳಿಗೆ ಧ್ವನಿ ಆಗುವಾಗ ಆಡಳಿತ ಪಕ್ಷ, ವಿರೋಧ ಪಕ್ಷ ಎಂದು ಭೇದ ಮಾಡುತ್ತಿರಲಿಲ್ಲ ಎಂದರು. ಅದೇ ಕಾಲಕ್ಕೆ ಎಂಥದೇ ಗಂಭೀರ ಪರಿಸ್ಥಿತಿಯನ್ನು ನವಿರು ಹಾಸ್ಯದ ಮೂಲಕ ತಿಳಿಗೊಳಿಸುವ ಸ್ವಭಾವ ಅವರದಾಗಿತ್ತು. ಸಹಕಾರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದ ಕತ್ತಿ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಲವು ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದರು. ಸಕ್ಕರೆ ಉದ್ಯಮಕ್ಕೆ ಅವರ ಕೊಡುಗೆ ಮರೆಯುವಂತಿಲ್ಲ ಎಂದು ಡಿಕೆಶಿ ಹೇಳಿದರು
ಸಕ್ಕರೆ ಉದ್ಯಮಕ್ಕೆ ಸಚಿವ ಉಮೇಶ್ ಕತ್ತಿ ನೀಡಿದ ಕೊಡುಗೆ ಮರೆಯುವಂತಿಲ್ಲ
Date: