No menu items!
14.3 C
Munich
Saturday, May 30, 2026

ಡಿಕೆ ಶಿವಕುಮಾರ್ ಪ್ರಮಾಣವಚನಕ್ಕೆ ಮುಹೂರ್ತ ನಿಗದಿ; ಬುಧವಾರ ನೂತನ ಸಿಎಂ ಆಗಿ ಅಧಿಕಾರ ಸ್ವೀಕಾರ

Must read

ಡಿಕೆ ಶಿವಕುಮಾರ್ ಪ್ರಮಾಣವಚನಕ್ಕೆ ಮುಹೂರ್ತ ನಿಗದಿ; ಬುಧವಾರ ನೂತನ ಸಿಎಂ ಆಗಿ ಅಧಿಕಾರ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ವೇಗ ಸಿಕ್ಕಿದ್ದು, ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭಕ್ಕೆ ಮುಹೂರ್ತ ನಿಗದಿಯಾಗಿದೆ. ಬುಧವಾರ ಸಂಜೆ ಅವರು ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೂಲಗಳ ಪ್ರಕಾರ, ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗದಲ್ಲಿ ಬುಧವಾರ ಸಂಜೆ 4 ಗಂಟೆಯ ಬಳಿಕ ನಡೆಯುವ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆಯ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆಗೆ ಮುನ್ನವೇ ಡಿ.ಕೆ. ಶಿವಕುಮಾರ್ ರಾಜ್ಯಪಾಲರನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಸಾಮಾನ್ಯವಾಗಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸುವುದು ರಾಜಕೀಯ ಸಂಪ್ರದಾಯವಾಗಿದೆ. ಆದರೆ ರಾಜ್ಯಪಾಲರು ಇಂದು ಸಂಜೆ ಧರ್ಮಸ್ಥಳ ಪ್ರವಾಸಕ್ಕೆ ತೆರಳಲಿರುವ ಹಿನ್ನೆಲೆಯಲ್ಲಿ, ಅದಕ್ಕೂ ಮುನ್ನವೇ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.
ಡಿಕೆ ಶಿವಕುಮಾರ್ ಅವರ ಭೇಟಿ ಹಿನ್ನೆಲೆಯಲ್ಲಿ ಲೋಕಭವನದ ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಕೆಎಸ್ಆರ್ಪಿ ತುಕಡಿಗಳನ್ನು ಭದ್ರತಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಅಂತಿಮಗೊಳ್ಳುವ ಹಂತಕ್ಕೆ ತಲುಪಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಲಯದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ಶಾಸಕಾಂಗ ಪಕ್ಷದ ಸಭೆ, ಸಚಿವ ಸಂಪುಟ ರಚನೆ ಹಾಗೂ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಪಕ್ಷದ ನಾಯಕರು ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.
ಬುಧವಾರ ನಡೆಯಲಿರುವ ಪ್ರಮಾಣವಚನ ಸಮಾರಂಭದೊಂದಿಗೆ ರಾಜ್ಯ ರಾಜಕಾರಣದಲ್ಲಿ ಹೊಸ ಅಧ್ಯಾಯ ಆರಂಭವಾಗಲಿದ್ದು, ನೂತನ ಸರ್ಕಾರದ ಮೊದಲ ಹೆಜ್ಜೆಗಳತ್ತ ಎಲ್ಲರ ಚಿತ್ತ ನೆಟ್ಟಿದೆ.

- Advertisement -spot_img

More articles

- Advertisement -spot_img

Latest article