ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರಿಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ನೀಡಲು ಹಾಗೂ ಭಾರತೀಯ ಎ ತಂಡದ ಕೋಚ್, ಕನ್ನಡಿಗ ರಾಹುಲ್ ದ್ರಾವಿಡ್ ಗೆ ದ್ರೋಣಾಚಾರ್ಯ ಪ್ರಶಸ್ತಿ ನೀಡಲು ಶಿಫಾರಸು ಮಾಡಲಾಗಿದೆ.
ಅದೇರೀತಿ ಮಾಜಿ ಕ್ರಿಕೆಟಿಗ ಸುನಿಲ್ ಗವಸ್ಕರ್ ಅವರ ಹೆಸರನ್ನು ಧ್ಯಾನ್ ಚಂದ್ ಜೀವಮಾನ ಸಾಧನೆ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.