ಏರುತ್ತಿರುವ ವಾಯು ಮಾಲಿನ್ಯದ ಸಮಸ್ಯೆಯನ್ನು ಪರಿಹರಿಸಲು ಸುಧಾಕರ್ ಹೇಳಿದ್ದೇನು ?

0
67

ಏರುತ್ತಿರುವ ವಾಯು ಮಾಲಿನ್ಯದ ಸಮಸ್ಯೆಯನ್ನು ಪರಿಹರಿಸಲು ಬಹು-ಶಿಸ್ತೀಯ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾರತ ಶುದ್ಧ ಗಾಳಿ ಶೃಂಗಸಭೆ 2022 ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿ ಶ್ವಾಸಕೋಶಕ್ಕೆ ಸಂಬಂಧಿಸಿದ ಗಂಭೀರವಾದ ಕಾಯಿಲೆಗಳ ಪ್ರಕರಣಗಳು ಹೆಚ್ಚಿವೆ. ಇದಕ್ಕೆ ನಗರ ಪ್ರದೇಶಗಳಲ್ಲಿನ ಅತ್ಯಧಿಕ ಮಟ್ಟದ ಮಾಲಿನ್ಯವೇ ಕಾರಣ ಎಂದರು. ಇನ್ನೂ ಈ ಕಾರ್ಯಕ್ರಮದ ಮೂಲಕ ಪರಿಸರ ಹೋರಾಟಗಾರರು, ನೀತಿ ನಿರೂಪಕರು, ಕೈಗಾರಿಕೋದ್ಯಮಿಗಳು ಮತ್ತು ವಿದ್ಯಾರ್ಥಿಗಳನ್ನು ಐಸಿಎಎಸ್ ಒಂದೇ ಸೂರಿನಡಿಗೆ ತಂದಿದ್ದು, ಇಲ್ಲಿ ವಾಯು ಮಾಲಿನ್ಯ ಮತ್ತು ಹವಾಮಾನ ಬದಲಾವಣೆ ಕುರಿತು ಚರ್ಚಿಸಲಾಯಿತು.

LEAVE A REPLY

Please enter your comment!
Please enter your name here