ಗಾಂಜಾ ಮಾರಾಟಕ್ಕೆ ಯತ್ನಿಸ್ತಿದ್ದ ಇಬ್ಬರು ಆರೋಪಿಗಳು ಅಂದರ್

Must read

ಬೆಂಗಳೂರಿನಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸ್ತಿದ್ದ ಇಬ್ಬರು ಆರೋಪಿಗಳನ್ನು ಆರ್.ಎಮ್.ಸಿಯಾರ್ಡ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳು ಓರಿಸ್ಸಾದ ವ್ಯಕ್ತಿಯ ಮೂಲಕ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ಅದನ್ನು ಹೆಚ್ಚಿನ ಬೆಲೆಗೆ ನಗರದಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು. ಈ ಸಂಬಂಧ ಖಚಿತ ಮಾಹಿತಿ ಪಡೆದ ಪೊಲೀಸರು, ಬೈಕ್ ನಲ್ಲಿ ಗಾಂಜಾ ಇಟ್ಕೊಂಡು ನಗರದ ಹಲವೆಡೆ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳಿಂದ 23.3ಕೆ.ಜಿ ಗಾಂಜಾ, ಎರಡು ಮೊಬೈಲ್ ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇನ್ನೂ ಆರೋಪಿಗಳ ವಿರುದ್ಧ ಆರ್.ಎಮ್.ಸಿ ಯಾರ್ಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

- Advertisement -spot_img

More articles

- Advertisement -spot_img

Latest article