No menu items!
13.4 C
Munich
Monday, April 20, 2026

ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ನಾಳೆ ಬೆಂಗಳೂರಿಗೆ

Must read

ಬೆಂಗಳೂರು : ಎನ್ ಡಿ ಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಪ್ರಚಾರಾರ್ಥವಾಗಿ ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಶಾಂಗ್ರಿಲಾ ಹೊಟೇಲ್ ಗೆ ಆಗಮಿಸಲಿರುವ ದ್ರೌಪದಿ ಮುರ್ಮು ಅವರನ್ನು ಆದಿವಾಸಿ ಜನಾಂಗದ ಕಲಾ ತಂಡವು ಸಾಂಪ್ರದಾಯಿಕ ನೃತ್ಯದ ಮೂಲಕ ಸ್ವಾಗತಿಸಲಿದೆ. ಎಸ್ ಟಿ ಮೋರ್ಚಾ ನೇತೃತ್ವದಲ್ಲಿ ದ್ರೌಪದಿ ಮುರ್ಮು ಅವರನ್ನು ಅದ್ಧೂರಿಯಾಗಿ ಸ್ವಾಗತ ಕೋರಲು ನಿರ್ಧರಿಸಲಾಗಿದೆ.

ಮಹಿಳಾ ಮೋರ್ಚಾ ತಂಡದಿಂದ ಸಾವಿರಾರು ಕಾರ್ಯಕರ್ತರನ್ನು ಸೇರಿಸಲು ಆಲೋಚಿಸಲಾಗಿದೆ. ಸಂಜೆ ಐದು ಗಂಟೆಗೆ ಬಿಜೆಪಿ ಶಾಸಕರು ಮತ್ತು ಸಂಸದರ ಸಭೆ. ಈ ಸಭೆಯಲ್ಲಿ ಭಾಗವಹಿಸಿರುವ ಮುರ್ಮು ಚುನಾವಣೆಯಲ್ಲಿ ತಮ್ಮ ಪರ ಮತ ಚಲಾಯಿಸಲು ಕೋರಲಿದ್ದಾರೆ. ಸಭೆಯಲ್ಲಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಬಿಜೆಪಿ ಕರ್ನಾಟಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಸಭೆ ಮುಗಿಸಿ ನಾಳೆ ದೆಹಲಿಗೆ ವಾಪಸಾಗಲಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article