No menu items!
15.1 C
Munich
Thursday, September 17, 2026

ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಬಿಗ್ ರಿಲೀಫ್: ರೇಷನ್ ಕಾರ್ಡ್ ಇ-ಕೆವೈಸಿ ದಿನಾಂಕ ವಿಸ್ತರಣೆ

Must read

ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರದಿಂದ ಬಿಗ್ ರಿಲೀಫ್: ರೇಷನ್ ಕಾರ್ಡ್ ಇ-ಕೆವೈಸಿ ದಿನಾಂಕ ವಿಸ್ತರಣೆ

ಬೆಂಗಳೂರು: ರಾಜ್ಯ ಸರ್ಕಾರ ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ ನೀಡಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಎದುರಾಗುತ್ತಿರುವ ಸರ್ವರ್ ಸಮಸ್ಯೆಯಿಂದಾಗಿ ಇ-ಕೆವೈಸಿ ಪೂರ್ಣಗೊಳಿಸಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಪಡಿತರ ಚೀಟಿಯ ಇ-ಕೆವೈಸಿ ಗಡುವನ್ನು ವಿಸ್ತರಿಸಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶ ಹೊರಡಿಸಿದೆ.
ಈ ಹಿಂದೆ ಇ-ಕೆವೈಸಿ ಪೂರ್ಣಗೊಳಿಸಲು ಸೆಪ್ಟೆಂಬರ್ 30ರವರೆಗೆ ಗಡುವು ನೀಡಲಾಗಿತ್ತು. ಇದೀಗ ಈ ಗಡುವನ್ನು ಅಕ್ಟೋಬರ್ 20ರವರೆಗೆ ವಿಸ್ತರಿಸಲಾಗಿದೆ. ರಾಜ್ಯದ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರು ಅಕ್ಟೋಬರ್ 20ರೊಳಗೆ ಇ-ಕೆವೈಸಿ ಪೂರ್ಣಗೊಳಿಸಬಹುದಾಗಿದೆ.
ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಇ-ಕೆವೈಸಿ ಮಾಡಿಸಲು ಜನರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವಂತಾಗಿತ್ತು. ಈ ಸಮಸ್ಯೆಯನ್ನು ನ್ಯಾಯಬೆಲೆ ಅಂಗಡಿ ಮಾಲೀಕರು ಸರ್ಕಾರದ ಗಮನಕ್ಕೆ ತಂದಿದ್ದರು. ಈ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಗಡುವು ವಿಸ್ತರಣೆ ಮಾಡಿದೆ.
ಈ ಕುರಿತು ಸಚಿವ ರಿಜ್ವಾನ್ ಅರ್ಷದ್ ಅವರು ಪ್ರಕಟಣೆ ನೀಡಿದ್ದು, ಸರ್ವರ್ ಸಮಸ್ಯೆಯಿಂದ ಜನರು ಆತಂಕಪಡುವ ಅಗತ್ಯವಿಲ್ಲ. ಇ-ಕೆವೈಸಿ ಪೂರ್ಣಗೊಳಿಸಲು ಅಕ್ಟೋಬರ್ 20ರವರೆಗೆ ಕಾಲಾವಕಾಶ ನೀಡಲಾಗಿದ್ದು, ಪಡಿತರ ಚೀಟಿದಾರರು ಯಾವುದೇ ಆತಂಕವಿಲ್ಲದೆ ಇ-ಕೆವೈಸಿ ಪೂರ್ಣಗೊಳಿಸಿ ಸೌಲಭ್ಯ ಪಡೆಯುವಂತೆ ತಿಳಿಸಿದ್ದಾರೆ.
ಇದರ ಜೊತೆಗೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿಯಲ್ಲೂ ಬದಲಾವಣೆ ಮಾಡಲಾಗಿದೆ. ಅಕ್ಟೋಬರ್ 1ರಿಂದ ಜಾರಿಗೆ ಬರುವಂತೆ ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ 7ರಿಂದ ಮಧ್ಯಾಹ್ನ 12ರವರೆಗೆ ಹಾಗೂ ಸಂಜೆ 4ರಿಂದ ರಾತ್ರಿ 8ರವರೆಗೆ ಕಾರ್ಯನಿರ್ವಹಿಸಬೇಕು ಎಂದು ಇಲಾಖೆ ಆದೇಶಿಸಿದೆ.
ಬಡವರು ಮತ್ತು ದಿನಗೂಲಿ ಕಾರ್ಮಿಕರ ಹಿತದೃಷ್ಟಿಯಿಂದ ಈ ಸಮಯ ಬದಲಾವಣೆ ಮಾಡಲಾಗಿದೆ. ದಿನಗೂಲಿ ಕಾರ್ಮಿಕರು ತಮ್ಮ ಕೆಲಸಕ್ಕೆ ತೊಂದರೆಯಾಗದಂತೆ ಪಡಿತರ ಪಡೆಯಲು ಅನುಕೂಲವಾಗುವ ರೀತಿಯಲ್ಲಿ ಹೊಸ ವೇಳಾಪಟ್ಟಿ ಜಾರಿಗೆ ತರಲಾಗಿದೆ.

- Advertisement -spot_img

More articles

- Advertisement -spot_img

Latest article