ಬೆಂಗಳೂರು : ಶಾಸಕರು ಸೇರಿ 15 ಕ್ಕೂ ಹೆಚ್ಚು ಮುಖಂಡರಿಗೆ ಇ ಮೇಲ್ ಮೂಲಕ ದುಷ್ಕರ್ಮಿಗಳು ಕೊಲೆ ಬೆದರಿಕೆ ಹಾಕಿದ್ದಾರೆ. ಶಾಸಕರಾದ ಅರವಿಂದ್ ಲಿಂಬಾವಳಿ, ಅಖಂಡ ಶ್ರೀನಿವಾಸ ಮೂರ್ತಿ, ಎಂ, ಚಂದ್ರಪ್ಪ, ಗೂಳಿಹಟ್ಟಿ ಶೇಖರ್, ಡಿ.ಎಸ್. ಹುಲಗೇರಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸೇರಿ 15 ಜನರಿಗೆ ಇ ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಪೊಲೀಸ್ ಕಂಟ್ರೋಲ್ ರೂಂ ಗೆ ಬೆದರಿಕೆ ಪತ್ರದ ಮಾಹಿತಿ ದೊರೆತಿದೆ. ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಶಾಸಕರು ಮತ್ತು ಮುಖಂಡರಿಗೆ ಪೊಲೀಸರು ಸೂಚಿಸಿದ್ದಾರೆ. ಇನ್ನು ಪತ್ರ ಯಾರು ಬರೆದಿದ್ದಾರೆ ಎಂಬ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ಧಾರೆ.