No menu items!
22.1 C
Munich
Friday, May 22, 2026

ಎಬೋಲಾ ವೈರಸ್ ಹರಡುವ ಭೀತಿ: ಎಲ್ಲಾ ರಾಜ್ಯಗಳು ಎಚ್ಚರಿಕೆಯಿಂದ ಇರಲು ಕೇಂದ್ರದ ಮಹತ್ವದ ಸೂಚನೆ

Must read

ಎಬೋಲಾ ವೈರಸ್ ಹರಡುವ ಭೀತಿ: ಎಲ್ಲಾ ರಾಜ್ಯಗಳು ಎಚ್ಚರಿಕೆಯಿಂದ ಇರಲು ಕೇಂದ್ರದ ಮಹತ್ವದ ಸೂಚನೆ

ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆ ಎಬೋಲಾ ಸೋಂಕಿನ ಹಿನ್ನೆಲೆಯಲ್ಲಿ ಜಾಗತಿಕ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದ ಬೆನ್ನಲ್ಲೇ, ಭಾರತದಲ್ಲೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೇಂದ್ರ ಸರ್ಕಾರ ಕಠಿಣಗೊಳಿಸಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ದೇಶದ ಎಲ್ಲಾ ಪ್ರಮುಖ ವಿಮಾನ ನಿಲ್ದಾಣಗಳು ಹಾಗೂ ಬಂದರುಗಳಲ್ಲಿ ಪ್ರಯಾಣಿಕರ ಆರೋಗ್ಯ ತಪಾಸಣೆಯನ್ನು ಕಟ್ಟುನಿಟ್ಟಾಗಿ ನಡೆಸುವಂತೆ ಸೂಚನೆ ನೀಡಿದೆ. ಅಂತಾರಾಷ್ಟ್ರೀಯ ಆರೋಗ್ಯ ನಿಯಮಾವಳಿಗಳ ಹಿತದೃಷ್ಟಿಯಿಂದ ಸಾರ್ವಜನಿಕ ಆರೋಗ್ಯ ಕ್ರಮಗಳಿಗೆ ಸಹಕರಿಸುವಂತೆ ಸಲಹೆ ನೀಡಲಾಗಿದೆ.
ಪ್ರಯಾಣಿಕರಿಗೆ ಏನೆಲ್ಲ ಸೂಚನೆ?
ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ಉಗಾಂಡಾ ಮತ್ತು ದಕ್ಷಿಣ ಸೂಡಾನ್ ದೇಶಗಳಿಂದ ಭಾರತಕ್ಕೆ ಬರುವ ಅಥವಾ ಆ ದೇಶಗಳ ಮೂಲಕ ಪ್ರಯಾಣಿಸುವವರು ವಿಶೇಷ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಜ್ವರ, ತೀವ್ರ ದೌರ್ಬಲ್ಯ, ತಲೆನೋವು, ಸ್ನಾಯು ನೋವು, ವಾಂತಿ, ಅತಿಸಾರ, ಗಂಟಲು ನೋವು ಅಥವಾ ಅಸ್ಪಷ್ಟ ರಕ್ತಸ್ರಾವದಂತಹ ಲಕ್ಷಣಗಳು ಕಂಡುಬಂದರೆ ತಕ್ಷಣವೇ ವಿಮಾನ ನಿಲ್ದಾಣದ ಆರೋಗ್ಯಾಧಿಕಾರಿ ಅಥವಾ ಆರೋಗ್ಯ ಡೆಸ್ಕ್ ಅನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.
ಇದಲ್ಲದೆ, ಎಬೋಲಾ ಸೋಂಕಿತ ಅಥವಾ ಶಂಕಿತ ವ್ಯಕ್ತಿಯ ರಕ್ತ ಹಾಗೂ ದೇಹದ ದ್ರವಗಳ ಸಂಪರ್ಕಕ್ಕೆ ಬಂದಿರುವ ಇತಿಹಾಸವಿರುವವರೂ ಆರೋಗ್ಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಸಚಿವಾಲಯ ತಿಳಿಸಿದೆ.
ಭಾರತದಲ್ಲಿ ಇನ್ನೂ ಪ್ರಕರಣ ಇಲ್ಲ
ಮುನ್ನೆಚ್ಚರಿಕಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ಸದ್ಯಕ್ಕೆ ಭಾರತದಲ್ಲಿ ಯಾವುದೇ ಎಬೋಲಾ ಪ್ರಕರಣ ದಾಖಲಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ.
ಇತ್ತೀಚೆಗೆ WHO ಎಬೋಲಾ ಹರಡುವಿಕೆಯನ್ನು ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ಘೋಷಿಸಿತ್ತು. ಸೋಂಕಿನ ವೇಗದ ಹರಡುವಿಕೆ ಕುರಿತು WHO ಹಿರಿಯ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಉನ್ನತ ಮಟ್ಟದ ಸಭೆಗಳನ್ನು ನಡೆಸಿ ರಾಜ್ಯಗಳೊಂದಿಗೆ ಸಿದ್ಧತೆ ಕುರಿತು ಚರ್ಚಿಸಿದೆ.
ಎಬೋಲಾ ವೈರಸ್ ಹೇಗೆ ಹರಡುತ್ತದೆ?
ಎಬೋಲಾ ಅತ್ಯಂತ ತೀವ್ರ ಮತ್ತು ಮಾರಣಾಂತಿಕ ಸಾಂಕ್ರಾಮಿಕ ರೋಗವಾಗಿದೆ. ಸೋಂಕಿತ ವ್ಯಕ್ತಿಯ ರಕ್ತ, ಎಂಜಲು, ಬೆವರು, ಕಣ್ಣೀರು, ವಾಂತಿ, ಮಲ ಹಾಗೂ ತಾಯಿಯ ಹಾಲು ಸೇರಿದಂತೆ ದೇಹದ ದ್ರವಗಳ ನೇರ ಸಂಪರ್ಕದಿಂದ ಸೋಂಕು ಹರಡುತ್ತದೆ.
ಸೋಂಕಿನಿಂದ ಮೃತಪಟ್ಟವರ ಮೃತದೇಹದ ಸಂಪರ್ಕದಿಂದಲೂ ವೈರಸ್ ಹರಡುವ ಸಾಧ್ಯತೆ ಇದೆ. ಆರಂಭದಲ್ಲಿ ಜ್ವರ, ತಲೆನೋವು, ಸ್ನಾಯು ಮತ್ತು ಸಂಧಿ ನೋವು ಕಾಣಿಸಿಕೊಳ್ಳಬಹುದು. ನಂತರ ಆಂತರಿಕ ಮತ್ತು ಬಾಹ್ಯ ರಕ್ತಸ್ರಾವ ಕಾಣಿಸಿಕೊಳ್ಳುವುದು ಎಬೋಲಾ ಸೋಂಕಿನ ಗಂಭೀರ ಲಕ್ಷಣಗಳಲ್ಲಿ ಒಂದಾಗಿದೆ.

- Advertisement -spot_img

More articles

- Advertisement -spot_img

Latest article