No menu items!
5.3 C
Munich
Wednesday, September 23, 2026

ಬೆಳಗಾವಿಯಲ್ಲಿ ಇಡಿ ರೇಡ್: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿಕರ ನಿವಾಸ ಸೇರಿ 6 ಕಡೆ ಶೋಧ

Must read

ಬೆಳಗಾವಿಯಲ್ಲಿ ಇಡಿ ರೇಡ್: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿಕರ ನಿವಾಸ ಸೇರಿ 6 ಕಡೆ ಶೋಧ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿರುವ ವೈ. ಮಂಜುನಾಥ್ ಅವರಿಗೆ ಸೇರಿದ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಇಂದು ಮುಂಜಾನೆ ಭಾರಿ ದಾಳಿ ನಡೆಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿಯಾಗಿರುವ ಮಂಜುನಾಥ್ ಅವರ ಆಸ್ತಿ ಮತ್ತು ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಗೋವಾ ಮತ್ತು ಬೆಂಗಳೂರಿನ ಇಡಿ ಅಧಿಕಾರಿಗಳ ಜಂಟಿ ತಂಡವು ಬೆಳಗಾವಿಯ ದೂರದರ್ಶನ ಕೇಂದ್ರದ ಸಮೀಪವಿರುವ ಅವರ ನಿವಾಸ ಸೇರಿದಂತೆ ಒಟ್ಟು ಆರು ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದೆ. ಕಾರ್ಯಾಚರಣೆಯ ವೇಳೆ ಭದ್ರತಾ ದೃಷ್ಟಿಯಿಂದ 10ಕ್ಕೂ ಹೆಚ್ಚು ಅರೆಸೇನಾ ಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಹಲವು ವರ್ಷಗಳಿಂದ ಬೆಳಗಾವಿ ವಲಯದಲ್ಲಿ ಅಬಕಾರಿ ಇಲಾಖೆಯ ಪ್ರಮುಖ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ವೈ. ಮಂಜುನಾಥ್ ಅವರಿಗೆ ಸಂಬಂಧಿಸಿದ ದಾಖಲೆಗಳು, ಆಸ್ತಿ ವಿವರಗಳು ಹಾಗೂ ಬ್ಯಾಂಕ್ ಖಾತೆಗಳ ಮಾಹಿತಿಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಬಳ್ಳಾರಿಯ ಮಾಜಿ ಸಂಸದ ದೇವೇಂದ್ರಪ್ಪ ಅವರ ಪುತ್ರರಾಗಿರುವ ಮಂಜುನಾಥ್, ಅಧಿಕಾರ ದುರುಪಯೋಗಪಡಿಸಿಕೊಂಡು ಬೇನಾಮಿ ಹೆಸರಿನಲ್ಲಿ ಜಮೀನು, ಬಾರ್ ಮತ್ತು ರೆಸ್ಟೋರೆಂಟ್ಗಳು ಸೇರಿದಂತೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.

- Advertisement -spot_img

More articles

- Advertisement -spot_img

Latest article