ದೊಡ್ಡಬಳ್ಳಾಪುರ: ಎಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ: ಇಡೀ ಸ್ಕೂಟರ್ ಭಸ್ಮ
ದೊಡ್ಡಬಳ್ಳಾಪುರ: ನಗರದಲ್ಲಿ ಬ್ಯಾಟರಿ ಚಾಲಿತ ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮವಾಗಿರುವ ಘಟನೆ ದೊಡ್ಡಬಳ್ಳಾಪುರ ನಗರದ ವಾಸವಿ ಕಲ್ಯಾಣ ಮಂಟಪದ ಸಮೀಪ ನಡೆದಿದೆ. ನೋಡನೋಡುತ್ತಿದ್ದಂತೆ ಹೊತ್ತಿ ಉರಿದಿದೆ. ಚಂದ್ರಶೇಖರ್ ಎಂಬುವರಿಗೆ ಸೇರಿದ ಎಲೆಕ್ಟ್ರಿಕ್ ವಾಹನವಾಗಿದ್ದು,
ಕಳೆದ ನಾಲ್ಕು ವರ್ಷಗಳ ಹಿಂದೆ ಜಪಾನ್ ಮೂಲದ ಎಲೆಕ್ಟ್ರಿಕ್ ಬೈಕ್ ಅನ್ನು ಖರೀದಿಸಿದ್ದರು. ಇತ್ತೀಚೆಗಷ್ಟೇ ನೂತನ ಬ್ಯಾಟರಿಯನ್ನು ಚಂದ್ರಶೇಖರ್ ಹಾಕಿಸಿದ್ದರು. ಇದೀಗ ಅಂಗಡಿ ಮುಂದೆ ನಿಲ್ಲಿಸಿದ ನಂತರ ಏಕಾಏಕಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ.
ಮುಖ್ಯ ರಸ್ತೆಯಲ್ಲಿ ದಟ್ಟವಾಗಿ ಆವರಿಸಿದ್ದರಿಂದ ಸ್ಥಳೀಯರಲ್ಲಿ ಆತಂಕವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.