ತಮಿಳು ನಿರ್ಮಾಪಕ ಸುಧನ್ ಸುಂದರಂ ಜೊತೆ ಶರ್ಮಿಳಾ ಮಾಂಡ್ರೆ ಎಂಗೇಜ್ಮೆಂಟ್!

0
73

ತಮಿಳು ನಿರ್ಮಾಪಕ ಸುಧನ್ ಸುಂದರಂ ಜೊತೆ ಶರ್ಮಿಳಾ ಮಾಂಡ್ರೆ ಎಂಗೇಜ್ಮೆಂಟ್!

ಕನ್ನಡ ಚಿತ್ರರಂಗದ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ  ನಿರ್ಮಾಪಕ ಸುಧನ್ ಸುಂದರಂ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಖಾಸಗಿ ಸ್ಟಾರ್ ಹೋಟೆಲ್‌ನಲ್ಲಿ ಕುಟುಂಬದವರು ಹಾಗೂ ಆಪ್ತರ ಸಮ್ಮುಖದಲ್ಲಿ ಸರಳ ಆದರೆ ಅದ್ದೂರಿಯಾಗಿ ನಿಶ್ಚಿತಾರ್ಥ ಸಮಾರಂಭ ನೆರವೇರಿದೆ.

ಈ ಶುಭ ಸಮಾರಂಭದ ಫೋಟೋಗಳನ್ನು ಶರ್ಮಿಳಾ ಮಾಂಡ್ರೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಕ್ಷಣಾರ್ಧದಲ್ಲೇ ವೈರಲ್ ಆಗಿವೆ. ಅಭಿಮಾನಿಗಳು, ಚಿತ್ರರಂಗದ ಸ್ನೇಹಿತರು ಹಾಗೂ ಆಪ್ತರು ನವಜೋಡಿಗೆ ಶುಭಾಶಯಗಳ ಮಹಾಪೂರ ಹರಿಸಿದ್ದಾರೆ.

ಸುಧನ್ ಸುಂದರಂ ತಮಿಳು ಚಿತ್ರರಂಗದ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದು, ಹಲವು ಯಶಸ್ವಿ ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಕೆಲ ದಿನಗಳ ಹಿಂದೆ ತಮ್ಮ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ ಎಂಬ ಸುಳಿವು ನೀಡಿದ್ದ ಶರ್ಮಿಳಾ, ಇದೀಗ ನಿಶ್ಚಿತಾರ್ಥದ ಮೂಲಕ ಆ ಸುದ್ದಿಯನ್ನು ಅಧಿಕೃತಗೊಳಿಸಿದ್ದಾರೆ.

ಮದುವೆಯ ದಿನಾಂಕ ಮತ್ತು ಸ್ಥಳವನ್ನು ಇನ್ನೂ ಬಹಿರಂಗಪಡಿಸಿಲ್ಲ. ಆದರೆ ಅದ್ದೂರಿ ವಿವಾಹ ಸಮಾರಂಭಕ್ಕೆ ಸಿದ್ಧತೆ ನಡೆಯುತ್ತಿದ್ದು, ಡೆಸ್ಟಿನೇಷನ್ ವೆಡ್ಡಿಂಗ್‌ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ನಿಶ್ಚಿತಾರ್ಥದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ಗಳಿಸುತ್ತಿದ್ದು, ಅಭಿಮಾನಿಗಳು ಈ ಜೋಡಿಗೆ ಶುಭ ಹಾರೈಸುತ್ತಿದ್ದಾರೆ.