ನಿಮ್ಮ ಫೇಸ್ ಬುಕ್ ಅಕೌಂಟ್ ಕೂಡ ಹ್ಯಾಕ್ ಆಗಿರ್ಬಹುದು? ಯಾವ್ದಕ್ಕೂ ಸ್ವಲ್ಪ ಹುಷಾರಾಗಿರಿ!
ಐದು ಕೋಟಿ ಫೇಸ್ ಬುಕ್ ಬಳಕೆದಾರರ ಖಾತೆಗಳಲ್ಲಿ ಭದ್ರತಾ ಸಮಸ್ಯೆ ಪತ್ತೆ ಹಚ್ಚಲಾಗಿದೆ ಎಂದು ಫೇಸ್ ಬುಕ್ ತಿಳಿಸಿದೆ.
ಫೇಸ್ ಬುಕ್ ಅಕೌಂಟ್ ಗಳನ್ನು ಹ್ಯಾಕರ್ ಗಳು ಕದ್ದಿರುವ ಶಂಕೆಯೂ ಇದೆ.
ಫೇಸ್ ಬುಕ್ ಖಾತೆಗಳು ದುರುಪಯೋಗವಾಗಿದೆಯೇ ಎಂಬುದರ ಬಗ್ಗೆ ಕೂಡ ತನಿಖೆ ನಡೆಸಲಾಗುತ್ತಿದೆ ಎಂದು ಫೇಸ್ ಬುಕ್ ಸಂಸ್ಥೆ ತಿಳಿಸಿದೆ.