ಫಲಪುಷ್ಪ ಪ್ರದರ್ಶನದಲ್ಲಿ ಅಪ್ಪು ದರ್ಶನ…!

1
36

ಬೆಂಗಳೂರಿನ ಲಾಲ್​ಬಾಗ್ ನಲ್ಲಿ ಆಗಸ್ಟ್ 5ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ ಎಂದು ತೋಟಗಾರಿಕೆ ಸಚಿವ ಮುನಿರತ್ನ ತಿಳಿಸಿದರು. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೊವಿಡ್ ಸಾಂಕ್ರಾಮಿಕದ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಫಲ ಪುಷ್ಪ ಪ್ರದರ್ಶನ ಸ್ಥಗಿತಗೊಂಡಿತ್ತು. ಈ ವರ್ಷದಿಂದ ಮತ್ತೆ ಆರಂಭವಾಗುತ್ತಿರುವ ಫಲಪುಷ್ಪ ಪ್ರದರ್ಶನವನ್ನು ಜನಪ್ರಿಯ ಸಿನಿಮಾ ನಟರು ಮತ್ತು ಕರ್ನಾಟಕದ ಸಾಂಸ್ಕೃತಿಕ ಐಕಾನ್​ಗಳು ಎಂದು ಖ್ಯಾತರಾದ ಡಾ.ರಾಜ್​ಕುಮಾರ್ ಮತ್ತು ಪುನೀತ್ ರಾಜ್​ಕುಮಾರ್ ಅವರಿಗೆ ಅರ್ಪಿಸಲಾಗಿದೆ ಎಂದು ಮುನಿರತ್ನ ತಿಳಿಸಿದರು.

 

ಆಗಸ್ಟ್ 5ರಂದು ಲಾಲ್​ಬಾಗ್​ನಲ್ಲಿ 212ನೇ ಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಒಟ್ಟು 11 ದಿನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ರಾಜ್​ ಕುಟುಂಬಸ್ಥರು ಪಾಲ್ಗೊಳ್ಳಲಿದ್ದಾರೆ. 2 ವರ್ಷದ ಬಳಿಕ ಫಲ, ಪುಷ್ಪ ಪ್ರದರ್ಶನ ಆಯೋಜನೆಯಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ಲಾಲ್​ಬಾಗ್​ ಪ್ರವೇಶ ದರ ಕಡಿಮೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಹತ್ತನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಫಲಪುಷ್ಪ ಪ್ರದರ್ಶನಕ್ಕೆ ಉಚಿತ ಪ್ರವೇಶ ಇರಲಿದೆ. ಈ ಬಾರಿ ಪುಷ್ಪ ಪ್ರದರ್ಶನದಲ್ಲಿ ಒಟ್ಟು 15 ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದೆ ಎಂದು ಸಚಿವ ಮುನಿರತ್ನ ಹೇಳಿದರು.

1 COMMENT

LEAVE A REPLY

Please enter your comment!
Please enter your name here