ವಿದೇಶಿ ಪ್ರಜೆಗಳ ಗಡಿಪಾರಿಗೆ ಒಂದು ತಿಂಗಳ ಗಡುವು..!

Date:

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ನಗರಗಳಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳಿಗೆ ಒಂದು ತಿಂಗಳೊಳಗೆ ಗಡಿಪಾರು ಮಾಡ್ಬೇಕು ಎಂದು ರಾಜ್ಯ ಸರ್ಕಾರ ಗೃಹ ಇಲಾಖೆಗೆ ಸೂಚನೆ ನೀಡಿದೆ. ವೀಸಾ ಅವಧಿ ಮುಗಿದರೂ ಕೂಡ ರಾಜ್ಯದಲ್ಲಿ ಸಾಕಷ್ಟು ವಿದೇಶಿ ಪ್ರಜೆಗಳು ಇಲ್ಲೆ ನೆಲೆ ನಿಂತಿದ್ದಾರೆ. ಅಂತವರನ್ನು ಕೂಡಲೇ ಗಡಿಪಾರು ಮಾಡಬೇಕೆಂದು ಒಂದು ತಿಂಗಳ ಕಾಲ ಗಡುವು ನೀಡಿದೆ ರಾಜ್ಯ ಸರ್ಕಾರ. ಬೆಂಗಳೂರಿನಲ್ಲೆ ಸುಮಾರು ಆರು ಸಾವಿರಕ್ಕೂ ಅಧಿಕ ಆಫ್ರಿಕಾ ಪ್ರಜೆಗಳಿದ್ದಾರೆ. ಇನ್ನು ರಾಜ್ಯದ ಇತರೆ ಭಾಗಗಳಲ್ಲಿ ಸುಮಾರು 14 ಸಾವಿರಕ್ಕೂ ಅಧಿಕ ವಿದೇಶಿ ಪ್ರಜೆಗಳ ವೀಸಾ ನವೀಕರಣಗೊಂಡಿಲ್ಲ. ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಒಂದು ತಿಂಗಳೊಳಗಾಗಿ ವೀಸಾ ನವೀಕರಣ ಮಾಡಿಕೊಳ್ಳದ ವಿದೇಶಿ ಪ್ರಜೆಗಳನ್ನು ಗಡಿಪಾರು ಮಾಡ್ಬೇಕು ಎಂದು ಗೃಹ ಇಲಾಖೆಗೆ ಸರ್ಕಾರ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಾಗಿ ರಾಜ್ಯ ಸರ್ಕಾರ ವಿದೇಶಾಂಗ ವ್ಯವಹಾರ ಇಲಾಖೆಗೆ ಪತ್ರ ಬರೆದಿದ್ದು, ಅದಕ್ಕೆ ಪ್ರತಿಕ್ರಿಯೆ ಬಂದ ಕೂಡಲೆ ಶೀಘ್ರ ಕ್ರಮಕ್ಕೆ ಆದೇಶಿಸಿದೆ. ನಗರದ ಕೊತ್ತನೂರು, ಹೆಣ್ಣೂರು ಕ್ರಾಸ್, ನಾಗವಾರ, ಲಿಂಗರಾಜುಪುರ, ಬಾಗಲೂರು ಸೇರಿತಂತೆ ನಗರದಾದ್ಯಂತ ಕೀನ್ಯಾ, ಉಗಾಂಡ, ಸುಡಾನ್, ನೈಜೀರಿಯಾ ದೇಶಗಳಿಂದ ಬಂದಿರುವ ವಿದೇಶಿ ಪ್ರಜೆಗಳು ವೀಸಾ ನವೀಕರಣ ಮಾಡಿಸಿಕೊಳ್ಳದೆ ಶಾಶ್ವತ ನೆಲೆ ಹೂರುವ ಯೋಜನೆ ಹಾಕಿಕೊಂಡಿದ್ದಾರೆ. ಅಲ್ಲದೆ ಇವರ ಬಳಿ ಸುಮಾರು 2 ಲಕ್ಷಕ್ಕೂ ಅಧಿಕ ನಕಲಿ ವೀಸಾವಿರೋದು ಕಂಡು ಬಂದಿದೆ. ಬೆಂಗಳೂರಿನಲ್ಲೆ ಸುಮಾರು 6 ಸಾವಿರ ಮಂದಿ ಇದ್ದರೆ ರಾಜ್ಯದ ಎರಡನೇ ಹಂತದ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಸಾಕಷ್ಟು ವಿದೇಶಿ ಪ್ರಜೆಗಳಿರೋದು ಕಂಡು ಬಂದಿದ್ದು, ಅಲ್ಲಿಯೂ ಕೂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

ಸತ್ರೂ ಲವ್ ಮ್ಯಾರೇಜ್ ಆಗಲ್ವಂತೆ ಈ ನಟಿ.

ಶುಭ ಶುಕ್ರವಾರದಂದು ತೆರೆಗೆ ಬರಲಿದೆ ಕುಳ್ಳನ ಚೌಕ

ಬಜೆಟ್-2017: ಯಾವುದು ತುಟ್ಟಿ, ಯಾವುದು ಅಗ್ಗ..?

ಮ್ಯಾಟ್ರಿಮೋನಿ ವೆಬ್‍ಸೈಟ್‍ಗಳಲ್ಲಿ ನಂಬರ್ ಕೊಡೋಕು ಮುನ್ನ ಈ ಸ್ಟೋರಿನ ಮಿಸ್ ಮಾಡ್ದೆ ಓದಿ

ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಯುವತಿ ಮಾಡಿದ್ದಾದ್ರೂ ಏನು..?

ಬಿಗ್‍ಬಾಸ್‍ನಲ್ಲಿ ಗೆದ್ದ ಹಣವನ್ನ ಏನ್ಮಾಡ್ತಾರಂತೆ ಗೊತ್ತಾ ಪ್ರಥಮ್..?

ಬಾಗಲಕೋಟೆ ಹುಡುಗರ ಮಾಸ್ತಿಗುಡಿ ಕ್ಲೈಮ್ಯಾಕ್ಸ್ ಗೆ ಸಿಕ್ತು ಸಖತ್ ರೆಸ್ಪಾನ್ಸ್..!

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...