ಗಣೇಶ ಹಬ್ಬದ ನೆಪದಲ್ಲಿ ಶಿಕ್ಷಣ ಇಲಾಖೆಗೆ ವಕ್ಫ್ ಬೋರ್ಡ್ ಹೊಸ ಬೇಡಿಕೆ

0
62

ಗಣೇಶ ಹಬ್ಬದ ಹೆಸರಿನಲ್ಲಿ ಶಿಕ್ಷಣ ಇಲಾಖೆ ಮುಂದೆ ವಕ್ಫ್ ಬೋರ್ಡ್ ಹೊಸ ಬೇಡಿಕೆ ಇಡುವ ಮೂಲಕ ಮತ್ತೊಂದು ಧರ್ಮ ದಂಗಲ್ ಉಂಟಾಗಿದೆ. ಶಾಲೆಗಳಲ್ಲಿ ನಮಾಜ್‌ಗೆ ಪ್ರತ್ಯೇಕ ಕೊಠಡಿ ಮೀಸಲಿಡಬೇಕು, ನಮ್ಮ ಧಾರ್ಮಿಕ ಹಬ್ಬಗಳ ಆಚರಣೆಗೂ ಅವಕಾಶ ಮಾಡಿಕೊಡಬೇಕು, ಎಲ್ಲಾ ಧರ್ಮದ ಮಕ್ಕಳಿಗೂ ಸಮಾನ ಅವಕಾಶ ಸಿಗಬೇಕು, ಗಣೇಶ ಹಬ್ಬದಂತೆ ಈದ್ ಮಿಲಾದ್ ಹಬ್ಬದ ಆಚರಣೆಗೂ ಅವಕಾಶ ಕೊಡಬೇಕು, ಪ್ರತಿ ಮಕ್ಕಳಿಗೂ ಧರ್ಮದ ಕುರಿತು ಅರಿವು ಮೂಡಿಸಬೇಕು, ನೈತಿಕ ಶಿಕ್ಷಣ ಅಡಿ ಧಾರ್ಮಿಕ ಪಾಠ ಮಕ್ಕಳಿಗೆ ನೀಡಬೇಕು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಫಿ ಸಾ ಅದಿ ಅವರು ಬೇಡಿಕೆ ಇಟ್ಟಿದ್ದಾರೆ. ಶಿಕ್ಷಣ ಸಚಿವರ ತೀರ್ಮಾನವನ್ನು ನಾವು ಸ್ವಾಗತಿಸುತ್ತೇವೆ. ಹಿಜಾಬ್ ವಿವಾದ ಆದಾಗಲೂ ನಾವು ಒಂದು ವಿಷಯ ಸ್ಪಷ್ಟ ಪಡಿಸಿದ್ದೇವೆ. ಧಾರ್ಮಿಕ‌ ವಿಚಾರಗಳನ್ನು ತಿಳಿಸುವ ಮೂಲಕ ಅಪನಂಬಿಕೆ ಹೋಗಲಾಡಿಸಬೇಕು. ಎಲ್ಲಾ ಧಾರ್ಮಿಕ ಆಚರಣೆಗಳಿಗೂ ಅವಕಾಶ ಮಾಡಿಕೊಡಬೇಕು. ಗಣೇಶೋತ್ಸವಕ್ಕೆ ಅವಕಾಶ ಕೊಟ್ಟ ರೀತಿಯಲ್ಲೇ ಇಸ್ಲಾಮಿಕ್ ಧಾರ್ಮಿಕ ಅವಕಾಶಕ್ಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here