ಬೆಂಗಳೂರಿನಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದಿದೆ. ಪದೇ ಪದೇ ಇಂಥಾ ಘಟನೆಗಳು ನಡೆಯುತ್ತಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.
ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನ ಪಾಳ್ಯದಿಂದ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಲಾಗಿದೆ ಎಂದು ಹೇಳಲಾಗುತ್ತಿದೆ.
ಆರೋಪಿಗಳಾದ ಸಂತೋಷ್, ಆಕಾಶ್ ಮತ್ತು ಜೋಸೆಫ್ ಈಗ ಪೊಲೀಸರ ಅತಿಥಿಯಾಗಿದ್ದಾರೆ.
ಸಂತ್ರಸ್ತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೊಲೀಸರು ಆರೋಪಿಗಳ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.