ಭವಿಷ್ಯ ನಿಧಿ (ಪಿಎಫ್) ಹಣ ಮರಳಿ ಪಡೆಯುವ ಸಂದರ್ಭದಲ್ಲಿ ತೆರಿಗೆ ವಿಧಿಸುವ ಕೇಂದ್ರ ಪ್ರಸ್ತಾವಕ್ಕೆ ಕಾರ್ಮಿಕ ಸಂಘಟನೆಗಳಿಂದ ತೀವ್ರ ವಿರೋಧವ್ಯಕ್ತವಾಗಿದೆ. ಇಂದು ಬೆಂಗಳೂರಿನ ಬೊಮ್ಮನಹಳ್ಳಿಯ ಕೈಗಾರಿಕ ಪ್ರದೇಶದ ಗಾರ್ಮೆಂಟ್ಸ್ ನ ಸಾವಿರಾರು ನೌಕರರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ರು. ಕೇಂದ್ರ ಸರ್ಕಾರದ ನೀತಿಯ ವಿರುದ್ಧ ದಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದ್ರು. ಈ ವೇಳೆ, ಬಂದೋಬಸ್ತ್ ಗಾಗಿ ಬಂದಿದ್ದ ಪೊಲೀಸರ ನಡುವೆ ಮಾತಿನಚಕಮಕಿ ನಡೆದು, ಪೊಲೀಸರ ಮೇಲೆ ಕಲ್ಲುತೂರಾಟ ಮಾಡಿದ್ದಾರೆ. ಘಟನೆಯಲ್ಲಿ ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು ತಹಬಂದಿಗೆ ತರಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಕೆಲ ನೌಕರರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಇದೇ ರೀತಿ ಮಂಡ್ಯದ ಗೆಜ್ಜಲಗೆರೆ ಬಳಿ ಇರುವ ಇಂಡಸ್ಟ್ರಿಯಲ್ ಏರಿಯಾ ಕಾರ್ಮಿಕರು ಬೃಹತ್ ಪ್ರತಿಭಟನೆ ಮಾಡ್ತಿದ್ದಾರೆ. ಹೊಸ ಪಿಎಫ್ ನೀತಿಯಿಂದ ಬದುಕುವುದು ಕಷ್ಟವಾಗುತ್ತೆ. ತಮ್ಮ ಮಕ್ಕಳ ವಿದ್ಯಾಭ್ಯಾಸ, ಮದುವೆ, ಇನ್ನಿತರ ಕಾರ್ಯಗಳಿಗೆ ನಮ್ಮ ದುಡ್ಡನ್ನು ಉಪಯೋಗಿಸಿಕೊಳ್ಳಲು ಸಾಧ್ಯವಾಗಲ್ಲ. ಕೇಂದ್ರ ಸರ್ಕಾರ ಬಡವರ ಜೀವನದ ಜೊತೆ ಆಟವಾಡ್ತಿದೆ. ಹೀಗಾಗಿ ಆದಷ್ಟು ಬೇಗ ಎಚ್ಚೆತ್ತು ಹೊಸ ಪಿಎಫ್ ನೀತಿಯನ್ನು ಕೈ ಬಿಡಬೇಕು ಅಂತ ಒತ್ತಾಯಿಸಿದ್ದಾರೆ. ಬೆಳಗ್ಗೆ 9 ಘಂಟೆಯಿಂದಲೇ ಸಾವಿರಾರು ಮಂದಿ ಕಾರ್ಮಿಕರು ಬೆಂಗಳೂರು ಮೈಸೂರು ಹೆದ್ದಾರಿ ತಡೆದು ತಮ್ಮ ಆಕ್ರೋಶನ್ನು ಹೊರಹಾಕಿದ್ದಾರೆ.
https://www.youtube.com/watch?v=xCrOKyGuH6k
- ರಘು ಇಂಜನಹಳ್ಳಿ
POPULAR STORIES :
ಸ್ನಾನ ಮಾಡುತ್ತಿದ್ದವಳ ವಿಡಿಯೋ ಚಿತ್ರೀಕರಣ ಮಾಡಿದ..! ಕತ್ರೀನಾ ಕೈಫ್ ಸಿಟ್ಟಾಗಿದ್ದೇ ಒದ್ದುಬಿಟ್ಟಳು..!?
ನಿದ್ದೆಗೆಟ್ಟರೇ ಸಾಯೋದು ಗ್ಯಾರಂಟಿ..!! ನಿದ್ದೆ ಬರ್ತಿಲ್ಲಾ.. ಯಾಕೋ ನಿದ್ದೆ ಬರ್ತಿಲ್ಲಾ..!!
ಐಪಿಎಲ್ ನಲ್ಲಿ ತುಂಡುಡುಗೆ ತೊಟ್ಟು ಕುಣಿಯೋ ಚಿಯರ್ ಗರ್ಲ್ಸ್ ಸ್ಯಾಲರಿ ಎಷ್ಟು ಗೊತ್ತಾ..?
ಅವಳ `ಆತ್ಮ’ ಅತೃಪ್ತಿಯಿಂದ ನರಳುತ್ತಿದೆ..! ಭಾರತ ಚಿತ್ರರಂಗ ಕಂಡ ಅಪ್ಪಟ `ಸೌಂದರ್ಯ’
ಮೂರರ ಪೋರನ ಸಿಟ್ಟಿಗೆ ಪೊಲೀಸರೇ ಕಂಗಾಲು..! ಅಬ್ಬಾ..!! ಮಕ್ಕಳು ಹೀಗೂ ಇರ್ತಾರಾ..!?
ಬ್ಲೂಫಿಲಂ ವೀಕ್ಷಿಸುವಾಗ ಅವಳ ವಯಸ್ಸು ಕೇವಲ ಒಂಬತ್ತು..! ಇದು ಹದಿನಾರರಲ್ಲಿ ಕನ್ಯತ್ವ ಕಳೆದುಕೊಂಡ ಸನ್ನಿಯ ಜೀವನಗಾಥೆ
ಇರಾಕಿ ರ್ಯಾಂಬೋ ಸತ್ತು ಹೋದ್ನಾ..!? ಐಸಿಸ್ ಉಗ್ರರನ್ನು ಕೊಲ್ಲುತ್ತಿದ್ದ ಹೀರೋ ಇನ್ನಿಲ್ಲ..!?
9 ವರ್ಷ, 11 ಬಾರಿ ಫೇಲ್ ಆದರೂ ಛಲ ಬಿಡದ ಆಫೀಸ್ ಬಾಯ್ ಕೊನೆಗೂ ಪೈಲೆಟ್ ಆದ..!
ಅಂದು ಐಐಟಿಯಿಂದ ರಿಜೆಕ್ಟ್, ಇಂದು 50 ಕೋಟಿ ವಹಿವಾಟು ಮಾಡೋ ಕಂಪನಿಗೆ ಸಿಇಓ..!
ಎಲ್ಲವೂ ಅಂದುಕೊಂಡಂತೆ ಆಗಿದ್ದರೇ ಇಷ್ಟೊತ್ತಿಗೆ ದಾವೂದ್ ಫಿನಿಶ್..! ಭೂಗತ ಡಾನ್ ನನ್ನು ಕೆಡವಲು ಮೋದಿ ಪ್ಲಾನ್ ಏನು..?