Home ಎಲ್ಲೆಲ್ಲಿ ಏನೇನು.? ಕಾಶ್ಮೀರದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಗೀತಾ ಮಿತ್ತಲ್

ಕಾಶ್ಮೀರದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಗೀತಾ ಮಿತ್ತಲ್

0
ಕಾಶ್ಮೀರದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಗೀತಾ ಮಿತ್ತಲ್

ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಗೀತಾ ಮಿತ್ತಲ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದಲ್ಲಿ ರಾಜ್ಯ ಪಾಲ ಎನ್ ಎನ್ ವೊಹ್ರಾ ಅವರು ಗೀತಾ ಮಿತ್ತಲ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಗೀತಾ ಅವರು ದೆಹಲಿ ಹೈಕೋರ್ಟ್ ನಲ್ಲಿ ತಾತ್ಕಾಲಿಕ ಮುಖ್ಯ ನ್ಯಾಯಮೂರ್ತಿಯಾಗಿ ಕೆಲಸ ಮಾಡುತ್ತಿದ್ದರು. ಆಗಸ್ಟ್ 4ರಂದು ಇವರನ್ನು ಕಣಿವೆ ರಾಜ್ಯದ ಮುಖ್ಯ ನ್ಯಾಯಮೂರ್ತಿಯನ್ನಾಗಿ ಮಾಡಲಾಗಿತ್ತು.
ಸುಪ್ರೀಂಕೋರ್ಟ್ ಕೊಲಿಜಿಯಂ ಜುಲೈ 16ರಂದು ಜಮ್ಮು ಕಾಶ್ಮೀರ ಹೈಕೋರ್ಟ್ ಗೆ ಗೀತಾ ಅವರ ಹೆಸರನ್ನು ಶಿಫಾರಸ್ಸು ಮಾಡಿತ್ತು.

LEAVE A REPLY

Please enter your comment!
Please enter your name here