No menu items!
18.7 C
Munich
Saturday, August 1, 2026

ಆಭರಣ ಪ್ರಿಯರಿಗೆ ಶುಭ ಸುದ್ದಿ: ಮತ್ತೆ ಚಿನ್ನದ ಬೆಲೆಯಲ್ಲಿ ಇಳಿಕೆ! ಇಂದಿನ ಚಿನ್ನದ ದರ ಹೇಗಿದೆ..?

Must read

ಆಭರಣ ಪ್ರಿಯರಿಗೆ ಶುಭ ಸುದ್ದಿ: ಮತ್ತೆ ಚಿನ್ನದ ಬೆಲೆಯಲ್ಲಿ ಇಳಿಕೆ! ಇಂದಿನ ಚಿನ್ನದ ದರ ಹೇಗಿದೆ..?

ಬೆಂಗಳೂರು: ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ ಕಂಡುಬಂದಿದೆ. ಪ್ರತಿ ಗ್ರಾಂಗೆ ₹35 ಕಡಿಮೆಯಾಗಿದ್ದು, ಕಳೆದ ನಾಲ್ಕು ತಿಂಗಳಿಂದ ಚಿನ್ನದ ದರದಲ್ಲಿ ಏರಿಳಿತ ಮುಂದುವರಿದಿದೆ. ಜಾಗತಿಕ ಮಾರುಕಟ್ಟೆಯ ಬೆಳವಣಿಗೆಗಳ ಪರಿಣಾಮ ದೇಶೀಯ ಮಾರುಕಟ್ಟೆಯ ಮೇಲೂ ಕಾಣಿಸುತ್ತಿದ್ದು, ಬೆಳ್ಳಿ ದರ ಮಾತ್ರ ಯಥಾಸ್ಥಿತಿಯಲ್ಲಿದೆ.

ಪ್ರಸ್ತುತ ಭಾರತದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ₹1,32,200 ಆಗಿದ್ದು, 24 ಕ್ಯಾರಟ್ ಶುದ್ಧ ಚಿನ್ನದ ಬೆಲೆ ₹1,44,220ಕ್ಕೆ ತಲುಪಿದೆ. 100 ಗ್ರಾಂ ಬೆಳ್ಳಿಯ ಬೆಲೆ ₹23,500 ಆಗಿದೆ.

ಬೆಂಗಳೂರಿನಲ್ಲಿ 24 ಕ್ಯಾರಟ್ ಚಿನ್ನದ ಪ್ರತಿ ಗ್ರಾಂ ಬೆಲೆ ₹14,422 ಹಾಗೂ 22 ಕ್ಯಾರಟ್ ಚಿನ್ನದ ಪ್ರತಿ ಗ್ರಾಂ ಬೆಲೆ ₹13,220 ಆಗಿದೆ. ಬೆಳ್ಳಿ ಪ್ರತಿ ಗ್ರಾಂ ₹235 ದರದಲ್ಲೇ ಮುಂದುವರಿದಿದೆ.

ದೇಶದ ಪ್ರಮುಖ ನಗರಗಳಾದ ಬೆಂಗಳೂರು, ಚೆನ್ನೈ, ಮುಂಬೈ, ಕೋಲ್ಕತಾ, ಕೇರಳ ಮತ್ತು ಭುವನೇಶ್ವರದಲ್ಲಿ 22 ಕ್ಯಾರಟ್ ಚಿನ್ನದ ಪ್ರತಿ ಗ್ರಾಂ ಬೆಲೆ ₹13,220 ಇದ್ದರೆ, ದೆಹಲಿ, ಜೈಪುರ ಮತ್ತು ಲಖನೌನಲ್ಲಿ ₹13,235 ಹಾಗೂ ಅಹ್ಮದಾಬಾದ್‌ನಲ್ಲಿ ₹13,225 ದಾಖಲಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನದ ದರದಲ್ಲಿ ಅಲ್ಪ ಪ್ರಮಾಣದ ವ್ಯತ್ಯಾಸ ಕಂಡುಬಂದಿದೆ. ಜಾಗತಿಕ ಆರ್ಥಿಕ ಪರಿಸ್ಥಿತಿ, ಡಾಲರ್ ಮೌಲ್ಯ ಹಾಗೂ ಹೂಡಿಕೆದಾರರ ಬೇಡಿಕೆಯ ಪರಿಣಾಮ ಚಿನ್ನದ ಬೆಲೆಯಲ್ಲಿ ಏರಿಳಿತ ಮುಂದುವರಿದಿದ್ದು, ಬೆಳ್ಳಿ ದರ ಮಾತ್ರ ಸ್ಥಿರವಾಗಿದೆ.

- Advertisement -spot_img

More articles

- Advertisement -spot_img

Latest article