Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಗಮನಿಸಿ
ಭಾರತೀಯರು ಚಿನ್ನವನ್ನು ಕೇವಲ ಆಭರಣವಾಗಿ ನೋಡಲ್ಲ, ಬದಲಿಗೆ ಅದನ್ನು ಉಳಿತಾಯ, ಹೂಡಿಕೆಯಾಗಿ ಭಾವಿಸುತ್ತಾರೆ. ಹೀಗಾಗಿ ಇದರ ಸಂಗ್ರಹಕ್ಕಾಗಿ ಹಣ ಉಳಿಸಿ ಖರೀದಿಸುವ ಯೋಚನೆಯಲ್ಲಿರುತ್ತಾರೆ. ಬಂಗಾರ ಕೇವಲ ವ್ಯಕ್ತಿಯ ಸಂಪತ್ತನ್ನಲ್ಲದೆ ದೇಶದ ಆರ್ಥಿಕ ಶಕ್ತಿಯ ಸಂಕೇತವೂ ಆಗಿದ್ದು,
ಇಂದು ಯಾವುದೇ ದೇಶ ತಾನು ಹೊಂದಿರುವ ಚಿನ್ನದ ಪ್ರಮಾಣಕ್ಕನುಗುಣವಾಗಿ ತನ್ನ ಆರ್ಥಿಕ ಶಕ್ತಿಯನ್ನು ಪ್ರತಿನಿಧಿಸುತ್ತದೆ ಎಂದರೆ ತಪ್ಪಾಗಲಾರದು. ಭಾರತದಲ್ಲಿ ಚಿನ್ನಕ್ಕೆ ದೊಡ್ಡದಾದ ಮಾರುಕಟ್ಟೆ ಇದ್ದು ನಿತ್ಯ ಕೋಟ್ಯಂತರ ರೂಪಾಯಿಗಳಷ್ಟು ಚಿನ್ನದ ವಹಿವಾಟು ನಡೆಯುತ್ತಲೇ ಇರುತ್ತದೆ.
ಇಂದು ಸೋಮವಾರ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದ್ದರೆ, ಬೆಳ್ಳಿ ಬೆಲೆಯಲ್ಲಿ 80 ಪೈಸೆ ಏರಿಕೆ ಆಗಿದೆ ಆಭರಣ ಚಿನ್ನದ ಬೆಲೆ 9,275 ರೂ ಇದ್ದರೆ, ಅಪರಂಜಿ ಚಿನ್ನದ ಬೆಲೆ 10,118 ರೂನಲ್ಲಿ ಮುಂದುವರಿದಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 92,750 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,01,180 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,620 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 92,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,620 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 18ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,750 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,180 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,890 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,170 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,750 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,180 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,170 ರೂ