No menu items!
15.2 C
Munich
Wednesday, April 29, 2026

ದಾಂಪತ್ಯಕ್ಕೆ ಕಾಲಿಡ್ತಿದ್ದಾರೆ ಬಿಗ್ ಬಾಸ್ ಸ್ಪರ್ಧಿ

Must read

ಕನ್ನಡ ಬಿಗ್ ಬಾಸ್ ಸೀಸನ್ 3ರ ಸ್ಪರ್ಧಿ ನಟಿ ಗೌತಮಿ ಗೌಡ ದಾಂಪತ್ಯಕ್ಕೆ ಕಾಲಿಡುತ್ತಿದ್ದಾರೆ.ಇದೇ ತಿಂಗಳು 19ರಂದು ಗೌತಮಿ ಬಹುಕಾಲದ ಗೆಳೆಯ ಜಾರ್ಜ್ ಕ್ರಿಸ್ಟ್ ಅವರೊಂದಿಗೆ ವಿವಾಹವಾಗುತ್ತಿದ್ದಾರೆ.
ಕೆಲವು ವರ್ಷಗಳಿಂದ ಗೌತಮಿ ಮತ್ತು ಜಾರ್ಜ್ ಕ್ರಿಸ್ಟ್ ಪರಸ್ಪರ ಪ್ರೀತಿಸುತ್ತಿದ್ದಾರೆ. ಇವರ ಪ್ರೀತಿಗೆ ಎರಡೂ ಕುಟುಂಬದವರು ಸಹ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿವಾಹ ನಡೆಯಲಿದೆ. ಸಿನಿಮಾ ಮತ್ತು ಕಿರುತೆರೆಯ ಗಣ್ಯರು ಮದುವೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಖಾಸಗಿ ವಾಹಿನಿ ಧಾರವಾಹಿ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟವರು ಗೌತಮಿ. ಬಳಿಕ‌ ಬಿಗ್ ಬಾಸ್ ಗೂ ಹೋಗಿ ಮನೆಮಾತಾಗಿದ್ದರು. ಕಿರುತೆರೆ ಮಾತ್ರವಲ್ಲದೆ ಸಿನಿಮಾಗಳಲ್ಲೂ ನಟಿಸುತ್ತಿದ್ದಾರೆ. ಅಂಬರೀಶ್, ಸುದೀಪ್ ಅಭಿನಯದ ‘ಅಂಬಿ ನಿಂಗೆ ವಯಸ್ಸಾಯ್ತೋ’ ಸಿನಿಮಾದಲ್ಲಿ ಗೌತಮಿ ಸಹ ನಟಿಸಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article