No menu items!
5.3 C
Munich
Wednesday, September 23, 2026

ನಾಗೇಂದ್ರ ರಾಜೀನಾಮೆ ಪಕ್ಷಕ್ಕೆ ಮುಜುಗರ ತಂದಿದೆ, ರಾಜೀನಾಮೆ ನೀಡುವ ಅಗತ್ಯವಿರಲಿಲ್ಲ: ಡಿಸಿಎಂ ಪರಮೇಶ್ವರ್

Must read

ಮೈಸೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಕಾಂಗ್ರೆಸ್ ಪಕ್ಷಕ್ಕೆ ಖಂಡಿತವಾಗಿಯೂ ಮುಜುಗರ ತಂದಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಗೇಂದ್ರ ರಾಜೀನಾಮೆ ನೀಡುವ ಅಗತ್ಯವೇ ಇರಲಿಲ್ಲ. ಆದರೂ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಅವರು ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದರು.
ನಾಗೇಂದ್ರ ಅವರು ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದಾರೆ. ಬಿಜೆಪಿ ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಂಡಿದೆ. ಎರಡು ಬಾರಿ ರಾಜೀನಾಮೆ ಕೊಡಿಸಿ ಬಿಜೆಪಿ ರಾಜಕೀಯ ಮಾಡಿದೆ ಎಂದು ಪರಮೇಶ್ವರ್ ಆರೋಪಿಸಿದರು.
ನಾಗೇಂದ್ರ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಅಥವಾ ಸಿಬಿಐ ತನಿಖೆಯಲ್ಲಿ ಅವರ ಹೆಸರು ಉಲ್ಲೇಖವಾಗಿಲ್ಲ. ಅಲ್ಲದೆ, ನಾಗೇಂದ್ರ ಅವರು ಹಣ ಪಡೆದಿರುವುದಕ್ಕೆ ಯಾವುದೇ ಸಾಕ್ಷ್ಯವೂ ಇಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.
ತಾವು ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಹುತೇಕ 79ರಷ್ಟು ಹಣವನ್ನು ಈಗಾಗಲೇ ವಶಪಡಿಸಿಕೊಳ್ಳಲಾಗಿತ್ತು. ಇನ್ನೂ ಸುಮಾರು 5 ಕೋಟಿ ರೂಪಾಯಿ ವಸೂಲಿ ಪ್ರಕ್ರಿಯೆ ನಡೆಯುತ್ತಿದೆ. ಈ ಎಲ್ಲ ವಿಚಾರಗಳಲ್ಲೂ ನಾಗೇಂದ್ರ ಅವರ ಹೆಸರು ಎಲ್ಲಿಯೂ ಬಂದಿಲ್ಲ ಎಂದು ಹೇಳಿದರು.
ಇನ್ನು ಮೈಸೂರಿನಲ್ಲಿ ಕೆಐಎಡಿಬಿ ಭೂಮಿಗೆ ನೋಟಿಫಿಕೇಶನ್ ನೀಡಿರುವ ವಿಚಾರದ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಮೈಸೂರಿನಲ್ಲಿ ಹೆಚ್ಚಿನ ಕೈಗಾರಿಕೆಗಳು ಸ್ಥಾಪನೆಯಾಗಬೇಕು ಎಂಬ ಉದ್ದೇಶದಿಂದ ಭೂಮಿಗೆ ನೋಟಿಫಿಕೇಶನ್ ನೀಡಿರಬಹುದು. ಈ ವಿಚಾರವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೈಗಾರಿಕಾ ಸಚಿವರು ನೋಡಿಕೊಳ್ಳುತ್ತಾರೆ ಎಂದು ತಿಳಿಸಿದರು.
ನಾಗೇಂದ್ರ ಪ್ರಕರಣದ ವಾಸ್ತವಾಂಶವನ್ನು ಮುಂದಿನ ದಿನಗಳಲ್ಲಿ ಜನರ ಮುಂದೆ ತಿಳಿಸುತ್ತೇವೆ. ಬಿಜೆಪಿಯವರು ಸದನದಲ್ಲಿ ಈ ಬಗ್ಗೆ ಪ್ರಶ್ನೆ ಕೇಳಿ ಎಂದು ಹೇಳಿದರೂ ಪ್ರಶ್ನೆ ಕೇಳಲಿಲ್ಲ. ಅವರು ಕೇವಲ ರಾಜಕೀಯ ಮಾಡುತ್ತಿದ್ದಾರೆ ಎಂದು ಡಿಸಿಎಂ ಪರಮೇಶ್ವರ್ ಆರೋಪಿಸಿದರು.

- Advertisement -spot_img

More articles

- Advertisement -spot_img

Latest article