No menu items!
20.8 C
Munich
Tuesday, July 7, 2026

ಗ್ರಾಮೀಣ ಭಾರತದ ಸಂಪರ್ಕ ಕ್ರಾಂತಿಗೆ ಮುನ್ನಡೆ ನೀಡಿದ ಮಹಾನ್ ಎಂಜಿನಿಯರ್ ಡಾ. ಗಿರೀಶ್ ಭಾರದ್ವಾಜ್ ಇನ್ನಿಲ್ಲ!

Must read

ಮೀಣ ಭಾರತದ ಸಂಪರ್ಕ ಕ್ರಾಂತಿಗೆ ಮುನ್ನಡೆ ನೀಡಿದ ಮಹಾನ್ ಎಂಜಿನಿಯರ್ ಡಾ. ಗಿರೀಶ್ ಭಾರದ್ವಾಜ್ ಇನ್ನಿಲ್ಲ!

ಮಂಗಳೂರು: ಭಾರತದ ‘ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತಿ ಪಡೆದಿದ್ದ, ಪದ್ಮಶ್ರೀ ಪುರಸ್ಕೃತ ಹಿರಿಯ ಎಂಜಿನಿಯರ್ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ (ಜುಲೈ 7) ಮುಂಜಾನೆ ನಿಧನರಾದರು. ಕಳೆದ ಕೆಲವು ದಿನಗಳಿಂದ ಹೃದಯ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಉಷಾ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.
1950ರ ಮೇ 2ರಂದು ಸುಳ್ಯದಲ್ಲಿ ಜನಿಸಿದ್ದ ಡಾ. ಗಿರೀಶ್ ಭಾರದ್ವಾಜ್ ಅವರು 1973ರಲ್ಲಿ ಮಂಡ್ಯದ ಪಿಇಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್ನಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಪಡೆದಿದ್ದರು. ಗ್ರಾಮೀಣ ಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಡಬೇಕೆಂಬ ಸಂಕಲ್ಪದಿಂದ ಅವರು 1989ರಲ್ಲಿ ತಮ್ಮ ಸ್ವಗ್ರಾಮ ಅರಂಬೂರಿನಲ್ಲಿ ಪಯಸ್ವಿನಿ ನದಿಗೆ ಅಡ್ಡಲಾಗಿ ಕಡಿಮೆ ವೆಚ್ಚದ ಮೊದಲ ತೂಗು ಸೇತುವೆ ನಿರ್ಮಿಸಿ ವಿಶಿಷ್ಟ ಸಾಧನೆಯ ಪಯಣ ಆರಂಭಿಸಿದ್ದರು.
ಅದರ ಬಳಿಕ ದುರ್ಗಮ ಕಾಡು ಪ್ರದೇಶಗಳು, ನದಿ ದಾಟಲು ದೋಣಿಯನ್ನೇ ಅವಲಂಬಿಸಿದ್ದ ಹಳ್ಳಿಗಳು ಹಾಗೂ ರಸ್ತೆ ಸಂಪರ್ಕವಿಲ್ಲದ ಗ್ರಾಮಗಳಿಗೆ ಕಡಿಮೆ ವೆಚ್ಚದ ಪರಿಸರ ಸ್ನೇಹಿ ತೂಗು ಸೇತುವೆಗಳನ್ನು ನಿರ್ಮಿಸುವ ಮೂಲಕ ಸಾವಿರಾರು ಜನರ ಬದುಕಿಗೆ ಹೊಸ ದಾರಿ ತೆರೆದರು. ಕರ್ನಾಟಕದ ಜೊತೆಗೆ ಕೇರಳ, ಒಡಿಶಾ, ತೆಲಂಗಾಣ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ 120ಕ್ಕೂ ಹೆಚ್ಚು ತೂಗು ಸೇತುವೆಗಳನ್ನು ನಿರ್ಮಿಸಿ ರಾಷ್ಟ್ರದಾದ್ಯಂತ ಮೆಚ್ಚುಗೆ ಗಳಿಸಿದ್ದರು.
ಗ್ರಾಮೀಣ ಅಭಿವೃದ್ಧಿಗೆ ನೀಡಿದ ಅಪೂರ್ವ ಕೊಡುಗೆಯನ್ನು ಪರಿಗಣಿಸಿ ಭಾರತ ಸರ್ಕಾರ 2017ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಪದ್ಮಶ್ರೀ’ ನೀಡಿ ಅವರನ್ನು ಗೌರವಿಸಿತ್ತು. ಅಲ್ಲದೆ, ಟಿವಿ9 ನವನಕ್ಷತ್ರ ಸನ್ಮಾನಕ್ಕೂ ಅವರು ಭಾಜನರಾಗಿದ್ದರು.
ಡಾ. ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು, ತಾಂತ್ರಿಕ ವಲಯದ ತಜ್ಞರು ಹಾಗೂ ಗ್ರಾಮೀಣ ಭಾಗದ ಜನತೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನೂರಾರು ಹಳ್ಳಿಗಳಿಗೆ ಸಂಪರ್ಕದ ಸೇತುವೆ ಕಟ್ಟಿದ ಅಪರೂಪದ ತಾಂತ್ರಿಕ ಚಿಂತಕನ ಅಗಲಿಕೆಯಿಂದ ದೇಶ ಮಹತ್ವದ ಸಮಾಜಮುಖಿ ಎಂಜಿನಿಯರ್ರನ್ನು ಕಳೆದುಕೊಂಡಂತಾಗಿದೆ.

- Advertisement -spot_img

More articles

- Advertisement -spot_img

Latest article