‘ಒಂದು ಮೊಟ್ಟೆಯ ಕಥೆ’ ಚಿತ್ರದ ಮೂಲಕ ಸಿನಿರಂಗಕ್ಕೆ ಎಂಟ್ರಿಕೊಟ್ಟ ರಾಜ್ ಬಿ ಶೆಟ್ಟಿ, ಈಗ ‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’ ಪ್ರಯೋಗಿಸಲು ಮುಂದಾಗಿದ್ದಾರೆ.
ರಾಜ್ ಬಿ ಶೆಟ್ಟಿ ಅವರು ನಾಯಕನಾಗಿ ನಟಿಸುತ್ತಿರುವ ಈ ಚಿತ್ರಕ್ಕೆ ಚಮಕ್, ಅಯೋಗ್ಯ ಮೊದಲಾದ ಚಿತ್ರಗಳಿಗೆ ಬಂಡವಾಳ ಹೂಡಿದ್ದ ಚಂದ್ರಶೇಖರ್ ಅವರು ಬಂಡವಾಳ ಹೂಡುತ್ತಿದ್ದಾರೆ.
ರಾಜರಾಜೇಶ್ವರಿ ನಗರದ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಮುಹೂರ್ತ ನಡೆದಿದ್ದು, ಚಿತ್ರಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ.
ಚಿತ್ರದ ಫಸ್ಟ್ ಲುಕ್ ಅನ್ನು ಅಭಿಮಾನಿಗಳು ಮೆಚ್ಚಿದ್ದಾರೆ. ಚೊಚ್ಚಲ ಚಿತ್ರ ಒಂದು ಮೊಟ್ಟೆಯ ಕಥೆಯಲ್ಲಿ ಗೆದ್ದಿದ್ದ ಶೆಟ್ಟಿ ಅವರು ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಿಯೂ ಗೆಲ್ಲುವ ಸೂಚನೆ ಸಿಕ್ಕಿದೆ.