No menu items!
30.1 C
Munich
Wednesday, August 12, 2026

ಗುಟ್ಕಾ, ಪಾನ್ ಮಸಾಲಾ ಬಳಕೆದಾರರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಒಂದು ವರ್ಷ ನಿಷೇಧ ಜಾರಿ

Must read

ಗುಟ್ಕಾ, ಪಾನ್ ಮಸಾಲಾ ಬಳಕೆದಾರರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಒಂದು ವರ್ಷ ನಿಷೇಧ ಜಾರಿ

ಬೆಂಗಳೂರು: ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಹಾಗೂ ಇತರ ನಿಷೇಧಿತ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ವಿತರಣೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006ರ ಅಡಿಯಲ್ಲಿ ಸರ್ಕಾರ ಈ ನಿಷೇಧ ಜಾರಿಗೊಳಿಸಿದ್ದು, ನಿಷೇಧಿತ ಉತ್ಪನ್ನಗಳ ವಿರುದ್ಧ ರಾಜ್ಯಾದ್ಯಂತ ವಿಶೇಷ ತಪಾಸಣೆ ಹಾಗೂ ದಾಳಿ ಕಾರ್ಯಾಚರಣೆಗಳನ್ನು ಆರಂಭಿಸಲಾಗಿದೆ. ಆಹಾರ ಸುರಕ್ಷತಾ ಅಧಿಕಾರಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
ಈ ಕುರಿತು ಆಗಸ್ಟ್ 10ರಂದು ಸರ್ಕಾರಿ ಅಧಿಸೂಚನೆ ಹೊರಡಿಸಲಾಗಿದ್ದು, ಅಧಿಸೂಚನೆ ಹೊರಡಿಸಿದ ದಿನಾಂಕದಿಂದ ಒಂದು ವರ್ಷದ ಅವಧಿಗೆ ನಿಷೇಧ ಜಾರಿಯಲ್ಲಿರಲಿದೆ.
ಈ ಅವಧಿಯಲ್ಲಿ ರಾಜ್ಯದ ಯಾವುದೇ ಭಾಗದಲ್ಲಿ ನಿಷೇಧಿತ ತಂಬಾಕು ಅಥವಾ ನಿಕೋಟಿನ್ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ವಿತರಣೆ ಅಥವಾ ಮಾರಾಟ ಕಂಡುಬಂದರೆ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಮನವಿ ಮಾಡಿದೆ.
ನಿಷೇಧಿತ ಉತ್ಪನ್ನಗಳ ಬಳಕೆ ಹಾಗೂ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕುವ ಮೂಲಕ ಆರೋಗ್ಯಕರ ಮತ್ತು ವ್ಯಸನಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸರ್ಕಾರದೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕು ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಯುಕ್ತರು ಮನವಿ ಮಾಡಿದ್ದಾರೆ.

- Advertisement -spot_img

More articles

- Advertisement -spot_img

Latest article