No menu items!
17.6 C
Munich
Wednesday, April 29, 2026

ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಸರ್ಕಾರ ನಿರ್ಧಾರ

Must read

ರಾಜ್ಯದಲ್ಲಿರುವ ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಆಚಾರ್ ಹಾಲಪ್ಪ ವಿಧಾನಸಭೆಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ಅವಯಲ್ಲಿ ಶಾಸಕ ಹಾಲಪ್ಪ ಹರತಾಳ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಒಟ್ಟು 3341 ಮಿನಿ ಅಂಗನವಾಡಿ ಕೇಂದ್ರಗಳಿವೆ. ಇವುಗಳಲ್ಲಿ 1002 ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಮಾರ್ಗಸೂಚಿಗಳ ಪ್ರಕಾರ ಕೇಂದ್ರ ಸರ್ಕಾರವೇ ಇವುಗಳನ್ನು ಮೇಲ್ದರ್ಜೆ ಗೇರಿಸಬೇಕು. ಅವರು ಅನುಮತಿಸಿದರೆ ನಾವು ಸಿದ್ಧರಿದ್ದೇವೆ ಎಂದು ಹೇಳಿದರು. ಮಿನಿ ಅಂಗನವಾಡಿ ಕೇಂದ್ರ ಗಳನ್ನು ಮೇಲ್ದರ್ಜೆ ಗೇರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಈ ಬಗ್ಗೆಯೂ ಕೇಂದ್ರಕ್ಕೂ ಮನವರಿಕೆ ಮಾಡಿಕೊಟ್ಟಿದ್ದೇವೆ. ಪತ್ರ ವ್ಯವಹಾರವೂ ಕೂಡ ನಡೆದಿದೆ. ಕೇಂದ್ರದಿಂದ ನಮಗೆ ಸಾಕಾರಾತ್ಮಕ ಸ್ಪಂದನೆ ಸಿಗುವ ಸಂಭವವಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article